Sunday, January 25, 2026

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು.

ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ, ಸಾಹಿತ್ಯ, ಕೃಷಿ ಎಲ್ಲವೂ ನಮಗೆ ಅವಶ್ಯಕತೆಯಿದೆ. ಇಂತಹ ಕಾರ್ಯಕ್ರಮಗಳ ಮೂಲಕ ತುಳುವರಲ್ಲಿರುವ ವಿಶೇಷತೆಗಳನ್ನು ಅರಿಯುವ ಕಾರ್ಯವಾಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಅವರು ಒಡಿಯೂರು ಶ್ರೀ ಜನ್ಮ ದಿನೋತ್ಸವ ಸಮಿತಿ ಆಶ್ರಯದಲ್ಲಿ ಒಡಿಯೂರು ಶ್ರೀ ಜನ್ಮ ದಿನೋತ್ಸವ, ಗ್ರಾಮೋತ್ಸವದ ಅಂಗವಾಗಿ ಬನಾರಿ ಗದ್ದೆಯಲ್ಲಿ ಕೆಸರ್ ದ ಕಂಡೊಡೊಂಜಿ ದಿನೊ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸಾಧ್ವಿ ಶ್ರೀ ಮಾತಾನಂದಮಯಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಬಗೆಗಳ ಸ್ಪರ್ಧೆಗಳು ನಡೆದವು. ಯಶವಂತ ವಿಟ್ಲ ಸ್ವಾಗತಿಸಿದರು. ಗಣಪತಿ ಭಟ್ ಸೇರಾಜೆ ವಂದಿಸಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಡ ಕಾರ್ಯಕ್ರಮ ನಿರೂಪಿಸಿದರು. ನಗದು ಬಹುಮಾನವನ್ನು ಕೀರ್ತನ್ ರೈ ಪಡೆದುಕೊಂಡರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...