Monday, February 2, 2026

ಕುಡ್ತಮುಗೇರು: ಬಿಲ್ಲವ ಸಂಘದಿಂದ ಆರ್ಥಿಕ ನೆರವು

ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಹಾಗೂ ಮಹೀಳಾ ವೇದಿಕೆ ಕುಡ್ತಮುಗೇರು ವಲಯ ಇದರ ವತಿಯಿಂದ ನಡೆದ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಾದ ಲತಾ, ಲೀಲಾವತಿ. ಮತ್ತು ದಿವಾಕರ ಪೂಜಾರಿ ಅವರಿಗೆ ತಲಾ 10,000ದಂತೆ ಆರ್ಥಿಕ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ನರ್ಕಳ ಬ್ರಹ್ಮಶ್ರೀ ನಾರಾಯಣಗುರು ಗುರುಗಳ ಸಂದೇಶ ನೀಡಿದರು. ಸಹಾಯ ಧನ ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಗೌರವಾಧ್ಯಕ್ಷರಾದ ಮುಂಡಪ್ಪ ಪೂಜಾರಿ, ಕಾರ್‍ಯದರ್ಶಿ ಮನೀಷ್ ಪೂಜಾರಿ, ಲವೀನ್ ಪೂಜಾರಿ ಉಪಸ್ಥಿತರಿದ್ದರು. ಸುಜೀತ್ ಪೂಜಾರಿ ಕಾರ್‍ಯಕ್ರಮ ನಿರೂಪಿಸಿದರು. ಸುನೀತ ಕುಡ್ತಮುಗೇರು ವಂದಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...