Saturday, January 31, 2026

ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ 53ನೇ ವರ್ಷದ ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ೫೩ನೇ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಮಂಗಳವಾರ ನಾನಾ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮಾ. 9 ರಂದು ಶ್ರೀಗಣಪತಿ ಹೋಮದ ಬಳಿಕ ಶ್ರೀದೇವಿಯ ಕಲಶ ಪ್ರತಿಷ್ಠೆ ನಡೆದು, ಬಳಿಕ ನಾನಾ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ. ಮಂಗಳವಾರ ಪ್ರಾತಃ ಕಾಳ ಶ್ರೀ ಗಣಪತಿ ಹೋಮ, ಶ್ರೀ ನರಸಿಂಹ ಮಂಡಲ ಪೂಜೆ, ತುಲಾಭಾರ ಸೇವೆ, ಮಹಾಪೂಜೆ ನಡೆಯಿತು. ಆ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯ ಬಲಿ ಉತ್ಸವ, ಪಲ್ಲಕಿ ಉತ್ಸವ ನಡೆಯಿತು. ಶ್ರೀ ದೇವಿಗೆ ಅಲಂಕಾರ ಪೂಜೆ, ಹೂವಿನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಊರಪರವೂರಿನ ಅಪಾರ ಸಂಖ್ಯೆಯ ಭಕ್ತರು ಇದ್ದರು. ಸಂಜೆ ದೀಪಾರಾಧನೆ, ಆಂಜನೇಯ ಸ್ವಾಮಿಯ ಮಹಾಪೂಜೆ ನಡೆಯಿತು.

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...