Thursday, February 13, 2025

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ನೈವೇದ್ಯ ಕೊಠಡಿ ಲೋಕಾರ್ಪಣೆ, ಹಾಗೂ ಚಿನ್ನದ ಪ್ರಭಾವಳಿ ಸಮರ್ಪಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದ ಅರಿ ಕೊಟ್ಟಿಲು (ನೈವೇದ್ಯ ಕೊಟಡಿ) ದುರಸ್ತಿಯಲ್ಲಿದ್ದು ,ದುರಸ್ತಿ ಕಾರ್ಯ ಈ ಹಿಂದೆ ಆರಂಭಗೊಂಡು ಇದೀಗ ಪೂರ್ಣಗೊಂಡಿದ್ದು 24ರಂದು ಶನಿವಾರ ದೇವಳದ ವಾರ್ಷಿಕ ಬ್ರಹ್ಮ ಕಳಸೋತ್ಸವದ ವಾರ್ಷಿಕ ದಿನದಂದು ಲೋಕಾರ್ಪಣೆಗೊಳ್ಳಲಿರುವುದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ

ಇದರ ಅಂಗವಾಗಿ 22ನೇ ತಾರೀಕು ಗುರುವಾರದಂದು ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭಗೊಂಡು 24ರಂದು ಮುಕ್ತಾಯಗೊಳ್ಳಲಿದೆ ಪ್ರಾರಂಭದ ದಿನ22 ರಂದು ಪ್ರಾತಕಾಲ 12 ತೆಂಗಿನ ಕಾಯಿ ಗಣಪತಿ ಹವನ ,ವಾಸ್ತು ಪೂಜೆ, ರಾಕ್ಷೋಜ್ಞ ಹೋಮ, ಮತ್ತು ವಾಸ್ತು ಬಲಿ ನಡೆಯಲಿರುವುದು. 23 ರಂದು ಬೆಳಿಗ್ಗೆ ಪವಮಾನ ಹೋಮ ನಡೆಯಲಿದೆ.

24ರಂದು ಬ್ರಹ್ಮಕಲಶೋತ್ಸವದ ವಾರ್ಷಿಕ ದಿನದಂದು ಬೆಳಿಗ್ಗೆ 108 ಸಿಯಾಳ ಭಿಷೇಕ ಹೋಮ ಸಹಿತ 108 ಕಲಶ ರಾಧನೆ ,ಕಲಶಾಭಿಷೇಕ, ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿರುವುದಾಗಿ ಅವರು ತಿಳಿಸಿರುತ್ತಾರೆ. ಬ್ರಹ್ಮ ಕಲಶೋತ್ಸವದ ವಾರ್ಷಿಕ ದಿನವಾದ 24ರಂದೆ ಖ್ಯಾತ ಉದ್ಯಮಿಗಳಾದ ಎಎಂಆರ್ ಗ್ರೂಪ್ ಹೈದರಾಬಾದ್ ಇಲ್ಲಿಯ ಮಹೇಶ್ ರೆಡ್ಡಿ ಅವರು ಶ್ರೀ ದೇವರಿಗೆ ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನದ ಪ್ರಭಾವಳಿಯನ್ನು ಸಮರ್ಪಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...