Thursday, July 10, 2025

ಕುಕ್ಕಿಪಾಡಿ: ಜ್ಞಾನವಿಕಾಸ ಕೇಂದ್ರ ಮಾಸಿಕ ಸಭೆ

ಬಂಟ್ವಾಳ: ಸಿದ್ಧಕಟ್ಟೆ ವಲಯದ ನೇಸರ ಜ್ಞಾನ ವಿಕಾಸ ಕೇಂದ್ರದ ತಿಂಗಳ ಮಾಹಿತಿ ಕಾರ್ಯಕ್ರಮ ಪುಷ್ಪಾ ಅವರ ಅಧ್ಯಕ್ಷತೆಯಲ್ಲಿ ಮಾವಿನಕಟ್ಟೆಯಲ್ಲಿ ಜರಗಿತು.

ಪತ್ರಕರ್ತ ಮತ್ತು ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಗೋಪಾಲ ಅಂಚನ್ ಆಲದಪದವು ಅವರು ಆಕ್ಯುಪ್ರೆಷರ್‍ ಚಿಕಿತ್ಸೆ ಮತ್ತು ಕೊರೋನ ಸೋಂಕು ಹಿಮ್ಮೆಟ್ಟಿಸುವ ಮುಂಜಾಗೃತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸುಝುಕಿ ಶಕ್ತಿ ಸೇಲ್ಸ್ ಮಾಲಕ ಕರ್ಪೆ ಬಾವ ಗುತ್ತು ಮನೆ ಶ್ರೀಕಾಂತ್ ಅವರು ಜ್ಞಾನವಿಕಾಸ ಕೇಂದ್ರ ಸದಸ್ಯರಿಗೆ ಮಾಸ್ಕ್ ತರಿಸಿ ಉಪಯೋಗಿಸುವ ಬಗ್ಗೆ ತಿಳಿಸಿದರು.

ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಪ್ನಾ, ಸಿದ್ಧಕಟ್ಟೆ ವಲಯ ಮೇಲ್ವಿಚಾರಕಿ ಹರಿಣಾಕ್ಷಿ ರೈ ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಹೇಮಲತಾ ಉಪಸ್ಥಿತರಿದ್ದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...