Friday, June 27, 2025

ಪ್ರಚೋದನಕಾರಿ ಭಾಷಣ : ಭರತ್ ಕುಮ್ಡೇಲುಗೆ ಹೈಕೋರ್ಟ್ ರಿಲೀಫ್

ಪ್ರಚೋದನಕಾರಿ ಭಾಷಣ ಕೇಸ್ ನಲ್ಲಿ ಭಜರಂಗದಳ ಮುಖಂಡ ಭರತ್ ಕುಮ್ಡೇಲುಗೆ ಹೈಕೋರ್ಟ್ ರಿಲೀಫ್

ಭಜರಂಗದಳ ಪುತ್ತೂರು ಸಂಚಾಲಕ ಭರತ್ ಕುಮ್ಡೇಲು ವಿರುದ್ದ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ಆದೇಶ ಆಗಿದೆ.

ಭರತ್ ಕುಮ್ಡೇಲು ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಸೂಚನೆ ನೀಡಲಾಗಿದೆ.

ಹೈಕೋರ್ಟ್ ನ ನ್ಯಾ.ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.
ಮೇ.15 ಪುತ್ತೂರು ಜೈನ ಭವನದಲ್ಲಿ ವಿಎಚ್ ಪಿ ಹಮ್ಮಿಕೊಂಡಿದ್ದ ಕಾರ್ಯಕ್ರಮವಾದ ಸುಹಾಸ್‌ ಶೆಟ್ಟಿ ಶ್ರದ್ದಾಂಜಲಿ ಸಭೆಯಲ್ಲಿ ಭಾಷಣ ಮಾಡಿದ್ದ ಭಜರಂಗಳದ ಮುಖಂಡ ಭರತ್‌ ಕುಮ್ಡೇಲು ಅವರ ಮೇಲೆ
ಪುತ್ತೂರು ನಗರ ಠಾಣೆಯಲ್ಲಿ ಭರತ್ ವಿರುದ್ದ ಬಿಎನ್ ಎಸ್ 196, 353(2) ಅಡಿ ಎಫ್ಐಆರ್ ದಾಖಲಾಗಿತ್ತು

ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ಧಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...