Wednesday, July 9, 2025

ಲೋಕೇಶ್ ಮುಚ್ಚೂರ್ ಗೆ ಕುಂದೇಶ್ವರ ಸಮ್ಮಾನ್ ಪ್ರದಾನ

ಕಾರ್ಕಳ: ಕಟೀಲು   ಮೇಳದ ಪುಂಡು ವೇಷಧಾರಿ ಲೋಕೇಶ್ ಮುಚ್ಚೂರ್ ಅವರಿಗೆ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾಾನ ಜಾತ್ರೆೆಯ ಸಂದರ್ಭ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೇರು ಭಾಗವತ ಬಲಿಪ ನಾರಾಯಣ ಭಾಗವತರು ಪ್ರಶಸ್ತಿ ಪ್ರದಾನ ಮಾಡಿ, ಆಶೀರ್ವದಿಸಿದರು.
ಅಧ್ಯಕ್ಷತೆ ವಹಿಸಿದ್ದ ಒಂದೇ ದೇಶ- ಒಂದೇ ಶಿಕ್ಷಣ ರಾಷ್ಟ್ರೀಯ ಅಭಿಯಾನದ ರೂವಾರಿ ಪ್ರಕಾಶ್ ಅಂಚನ್ ದಡ್ಡಲಕಾಡು ಮಾತನಾಡಿ, ಸರಕಾರಿ ಶಾಲೆ ಉಳಿಸಿದರೆ ನಮ್ಮೂರಿನ ಸಂಸ್ಕೃತಿ, ಕಲೆ, ಪರಂಪರೆ ಬೆಳಗುತ್ತದೆ ಎಂದರು. ಪ್ರತಿ ಊರಿನವರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುವಂತೆ ವಿನಂತಿಸಿದರು.
ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ಯಕ್ಷಗಾನ, ಸಾಧಕರಿಗೆ ಸನ್ಮಾಾನ ಇತ್ಯಾಾದಿ ಕಾರ್ಯಗಳ ಮೂಲಕ ಧರ್ಮ ಕ್ಷೇತ್ರಗಳು ಕಲೆ, ಸಾಹಿತ್ಯ, ಸಂಸ್ಕೃತಿಗೆ  ಪ್ರೋತ್ಸಾಹ ನೀಡುತ್ತಿರುವುದು ಅಪೇಕ್ಷಣೀಯ ಎಂದರು.
ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಕಡು ಬಡತನದಲ್ಲಿ ಹುಟ್ಟಿ, ಗಾಡ್ ಫಾದರ್ ಗಳಿಲ್ಲದೆ ಸ್ವಯಂ ಪರಿಶ್ರಮದಿಂದ ಧಿಗಿಣ ವೀರನೆಂದೇ ಖ್ಯಾಾತರಾದ ಮಚ್ಚೂರು, ರಾತ್ರಿ ಇಡೀ ಯಕ್ಷ ರಂಗದಲ್ಲಿ ಮೆರೆದು, ಮರುದಿನ ಹೋಟೆಲ್ ನಲ್ಲಿ ಕನಿಷ್ಠ 8 ಗಂಟೆ ದುಡಿಯುವ ಕಾಯಕ ಯೋಗಿ ಎಂದರು. ಬಡ, ಹಿಂದುಳಿದ ವರ್ಗದ ಮುಚ್ಚೂರು, ಬದುಕಿನಲ್ಲಿ ಮೇಲೆದ್ದು ಬಂದು ಯಕ್ಷಲೋಕದಲ್ಲಿ ಮಿಂಚುತ್ತಿರುವ ರೀತಿಯೇ ಎಲ್ಲರಿಗೂ ಮಾದರಿ ಎಂದರು.
    
ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೆರ ಮಾತನಾಡಿದರು. ಜಿಪಂ ಸದಸ್ಯ ಉದಯ ಎಸ್. ಕೋಟ್ಯಾನ್, ಶ್ರೀ ಕ್ಷೇತ್ರದ ಪ್ರತಿನಿಧಿ ಗಂಗಾ ರಾಘವೇಂದ್ರ ಭಟ್, ಪ್ರಧಾನ ಅರ್ಚಕ ಕೃಷ್ಣರಾಜೇಂದ್ರ ಭಟ್, ವೇ ಮೂ. ರವೀಂದ್ರ ಭಟ್, ಸಚ್ಚಿದಾನಂದ ಎಡಮಲೆ, ಸುಧೀಂದ್ರ ಭಟ್, ಸುಜ್ಞೇಂದ್ರ ಭಟ್ ಇದ್ದರು.
ಇದೇ ಸಂದರ್ಭ ಹಿರಿಯ ಅರ್ಥಧಾರಿ ನಡಿಬೆಟ್ಟು ಧರ್ಮರಾಜ ಕಟ್ಟಡರಿಗೆ ಗೌರವ ಸನ್ಮಾಾನ ಮಾಡಲಾಯಿತು. ನವೀನ್ ಟಿ. ಆರ್., ಸುರೇಶ್ ಶಿರಂತಡ್ಕ ನಿರೂಪಿಸಿದರು.
ಯಕ್ಷ ವೈಭವ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ
ಕರಾವಳಿಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ, ವೀರ ಅಭಿಮನ್ಯು ಪ್ರದರ್ಶನ ಜನ ಮೆಚ್ಚುಗೆ ಗಳಿಸಿತು.
ಎಲ್ಲೂರು ರಾಮಚಂದ್ರ ಭಟ್ ಸಂಯೋಜನೆಯಲ್ಲಿ ಕದ್ರಿ ಬಾಲ ಯಕ್ಷಕೂಟದಿಂದ ನಡೆದ  “ಶ್ರೀಕೃಷ್ಣಲೀಲೆ” ಯಕ್ಷಗಾನ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರವಾಯಿತು.
ಲಕುಮಿ ತಂಡ ಕಲಾವಿದರಿಂದ ಅರವಿಂದ ಬೋಳಾರ್ ಪ್ರಧಾನ ಪಾತ್ರದಲ್ಲಿ ಹಾಸ್ಯ ಮಯ ತುಳು ನಾಟಕ “ಮಂಗೆ ಮಲ್ಪೊಡ್ಚಿ” ಪ್ರದರ್ಶನಗೊಂಡಿತು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...