ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಕುಂಜತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಫೆ.15 ರಂದು ಜರಗಲಿದೆ.
ಬೆಳಗ್ಗೆ ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕ ಕೃಷ್ಣ ಪೂಜಾರಿ ಅವರು ನೆರವೇರಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ಅವರು ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೂತನ ರಂಗ ಮಂದಿರವನ್ನು ಉದ್ಘಾಟಿಸಲಿರುವರು.ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು.
ಸಂಜೆ ಸಮಾರೋಪದಲ್ಲಿ ಮಡಂತ್ಯಾರು ಗ್ರಾ.ಪಂ.ಅಧ್ಯ ಕ್ಷ ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಲಿರುವರು.ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆವರಣ ಗೋಡೆ ಉದ್ಘಾಟಿಸಲಿರುವರು. ರಾತ್ರಿ ವಿದ್ಯಾರ್ಥಿಗಳಿಂದ ಮತ್ತು ಹಳೆ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.














