Friday, June 27, 2025

ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರ ದುರ್ಗಾನಗರ ಕುರಿಯಾಳ ಇದರ ನೂತನ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಕುರಿಯಾಳ ದುರ್ಗಾನಗರ ನೂತನ ನಿರ್ಮಿತ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಪತ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನ.21ರಂದು ಬಿಡುಗಡೆ ಮಾಡಿದರು.

 

ಬಳಿಕ ಮಾತನಾಡಿ ಹಳ್ಳಿ ಮತ್ತು ನಗರ ಪ್ರದೇಶದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ, ವಿಚಾರಧಾರೆ, ಜಾನಪದ ಕಟ್ಟುಕಟ್ಟಲೆ , ಧಾರ್ಮಿಕ ನಂಬಿಕೆ ಉಳಿದು ಬರಲು ಭಜನಾ ಮಂದಿರಗಳು ಕಾರಣವಾಗಿದೆ ಎಂದರು.

ಪತ್ರಕರ್ತ ರಾಜಾ ಬಂಟ್ವಾಳ್ ಮಾತನಾಡಿ ಭಜನಾ ಮಂದಿರ ಆರಂಭಕಾಲ, ಅದರ ಬೆಳವಣಿಗೆ ಬಗ್ಗೆ ತಿಳಿಸಿದರು.

ನಿವೃತ್ತ ಶಿಕ್ಷಕ ವೇದಾನಂದ ಕಾರಂತ ಶುಭ ಹಾರೈಸಿದರು.

ವೇದಿಕೆಯಲ್ಲಿ ಜೀರ್ನೋದ್ದಾರ ಸಮಿತಿ ಅಧ್ಯಕ್ಷ ವಸಂತಕುಮಾರ್ ವಿ. ಮಣಿಹಳ್ಳ, ಆಡಳಿತ ಸಮಿತಿ ಅಧ್ಯಕ್ಷ ಜಗದೀಶ ಸುವರ್ಣ ಪಾಪುದಡ್ಕ, ಪ್ರದೀಪ್ ಮಾರ್ಲ ಕುಟಿಲ, ಸತೀಶ್ ಶೆಟ್ಟಿ. ಶೇಖರ್ ಸಾಮಾನಿ,

ರೂಪೇಶ್ ಕುಟಿಲ, ಸುಹಾಸಿನಿ ಪಾಪುದಡ್ಕ, ಸುಜಾತಾ ಕುಕ್ಕಾಜೆ, ವನಿತಾ ದುರ್ಗಾನಗರ, ಜಗದೀಶ್ ಭಂಡಾರಿ, ಜಗದೀಶ್ ರೈ, ಮಿಥುನ್ ಸಾಮಾನಿ, ಧರ್ಮಣ್ ಬಂಗೇರ ದುರ್ಗಾನಗರ, ರೋಹಿದಾಸ್ ಕುಂದರ್, ಶಶಿ ಕಿರಣ್ bellore, ಅರ್ಚಕರಾದ ಹೊನ್ನಪ್ಪ ಪೂಜಾರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಡಿ. 24ರಿಂದ 27ರ ತನಕ ವಿವಿಧ ಧಾರ್ಮಿಕ, ವೈದಿಕ,ಸಾಂಸ್ಕ್ರೀತಿಕ ಕಾರ್ಯಕ್ರಮಗಳು ನಡೆಯಲಿದೆ.

ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಶೆಟ್ಟಿ ಪಡು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...