Tuesday, January 27, 2026

*ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ* *ಪತ್ರಕರ್ತರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪ್ರಭಾಕರ ಶರ್ಮ*

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ, ಪತ್ರಕರ್ತರ ಸಂಘ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಮಾದರಿಯಾಗಿವೆ. ಕುತ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಿರುವುದು ಶ್ಲಾಘನೀಯ. ಆದರೆ ಅಷ್ಟಕ್ಕೇ ಸೀಮಿತಗೊಳಿಸದೆ ಶಾಲೆಯ ಅಭಿವೃದ್ಧಿಗೆ ತಮ್ಮಿಂದಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಪಕತ್ರಕರ್ತರು ಕೇವಲ ವರದಿ ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ ಎಂಬುದನ್ನು ದ.ಕ. ಪತ್ರಕರ್ತರು ತೋರಿಸಿಕೊಟ್ಟಿದ್ದಾರೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಗುರುತಿಸಬೇಕಾದ ಅಂಶ ಎಂದವರು ಹೇಳಿದ ಅವರು. ದ.ಕ. ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಕೂಡ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರಸ್ತುತ ರಕ್ತದ ಸಂಗ್ರಹ ಕಡಿಮೆ ಇದ್ದು, ಇದನ್ನು ಹೆಚ್ಚಿಸುವ ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿ, ಪತ್ರಕರ್ತರ ಗ್ರಾಮವಾಸ್ತವ್ಯದಿಂದಾಗಿ ಈಗ ತಮ್ಮೂರಿನ ಚಿತ್ರಣವೇ ಬದಲಾಗಿದೆ. ಗ್ರಾಮ ವಾಸ್ತವ್ಯದ ಸಂದರ್ಭ ಊರವರಿಂದ ಬಂದ ೧೬೮ ಮನವಿಗಳ ಪೈಕಿ ಈಗಾಗಲೇ ೧೨೦ ಮನವಿಗಳಿಗೆ ಸ್ಪಂದನೆ ಸಿಕ್ಕಿದೆ. ಕಂಪ್ಯೂಟರ್, ಶಾಲಾ ಆವರಣ ಗೋಡೆ ನೀರ್ಮಾಣ, ನೋಟ್‌ಬುಕ್ ವಿತರಣೆ ಹೀಗೆ ಹಲವು ರೀತಿಯಲ್ಲಿ ಪತ್ರಕರ್ತರ ಸಂಘ ನೆರವಾಗಿದೆ ಎಂದವರು ಶ್ಲಾಸಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ರಾಜ್ಯ ಘಟಕದ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ್ ಡಿ. ಪಳ್ಳಿ ವಂದಿಸಿ, ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...