Tuesday, February 3, 2026

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಭೇಟಿ

ಮಂಗಳೂರು: ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿ ದೈವದ ದರ್ಶನವನ್ನು ಪಡೆದರು.

ನಾನು ಭೇಟಿ ನೀಡಿದಕ್ಕೆ ಯಾವುದೇ ನಿರ್ದಷ್ಟ ಕಾರಣ ಇಲ್ಲ, ನಾನು ಏನು ಪ್ರಾರ್ಥನೆ ಮಾಡಿದೆ ಅಂತಾ ಹೇಳಿದರೆ ನೀವು ಮಾಡಿಕೊಡ್ತೀರಾ” ಎಂದು ಪ್ರಶ್ನಿಸಿದ ಪತ್ರಕರ್ತರಿಗೆ ಮರು ಪ್ರಶ್ನೆ ಹಾಕಿದರು.

ಸುಮಲತಾ ಅವರು ಚುನಾವಣಗೆ ನಿಂತರೆ ಅವರ ಪರವಾಗಿ ಪ್ರಚಾರ ಮಾಡ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಹೆತ್ತ ತಾಯಿಯನ್ನು ಬಿಟ್ಟುಕೊಡಕ್ಕಾಗುತ್ತಾ? ಮೊನ್ನೆವರೆಗೂ ಎಲ್ಲಾ ಸುಮಲತಾ ಅಮ್ಮನ ಜೊತೆ ಇದ್ದೆ , ಈಗ ಅವರ ಕೈ ಬಿಟ್ರೆ ಆಗುತ್ತಾ ಸರ್ , ನಿಮ್ಮ ಮನೇಲಿ ನಿಮ್ಮ ತಾಯಿನ ಬಿಟ್ ಬಿಡ್ತೀರಾ, ಸುಮಲತಾ ಅಮ್ಮ ಅಮ್ಮನೇ ಸಾರ್” ಎಂದಿದ್ದಾರೆ.

ಈ ಸಂದರ್ಭದಲ್ಲಿ ಎ.ಜೆ. ವೈದ್ಯಕೀಯ ಕಾಲೇಜಿನ ಪ್ರಶಾಂತ್‌ ಮಾರ್ಲ, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಮಾಗಣ್ತಡಿಗುತ್ತು ಮಹಾಬಲ ಹೆಗ್ಡೆ ದೆಬ್ಬೇಲಿ, ಟ್ರಸ್ಟಿಗಳಾದ ಪ್ರೀತಮ್‌ ಶೆಟ್ಟಿ, ವಿದ್ಯಾಚರಣ್‌ ಶೆಟ್ಟಿ, ದೇವಿಪ್ರಸಾದ್‌ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

More from the blog

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...