Thursday, February 13, 2025

‘ಜನತಾ ನ್ಯಾಯಾಲಯದಲ್ಲಿ ಗೆಲುವು ಅಸಾಧ್ಯ’- ಶ್ರೀಧರ್ ಶೆಟ್ಟಿ

ವಿಟ್ಲ : ಉಡುಪಿ ಕಾಸರಗೋಡು ೪೦೦ ಕೆವಿ ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿ ಪತ್ರಿಕಾಗೋಷ್ಠಿ ನಡೆಸಿ, ಕಂಪೆನಿ ರೈತರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮಾತನಾಡಿದರು.

ತಮಿಳುನಾಡು ಭಾಗದಲ್ಲಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿಷೇಧ ಮಾಡಿ ಮಣ್ಣಿನ ಒಳಗೆ ಹೋಗಬೇಕೆಂದು ಸರಕಾರ ಆದೇಶವನ್ನು ಹೊರಡಿಸಿದೆ. ೪೦೦ ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ಹೊರ ಸೂಸುವ ವಿಕಿರಣದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಗ್ಗೆ ಆರೋಗ್ಯ ಇಲಾಖೆಯ ವರದಿ ಇದೆ. ಕೇಂದ್ರ ಸರಕಾರದ ಯೋಜನೆಯಾಗಿರದೆ ಖಾಸಗೀ ಕಂಪನಿಗೆ ದುಡ್ಡು ಮಾಡುವುದಕ್ಕಾಗಿ ಕೃಷಿ ಹಾಳುಗೆಡವುದಕ್ಕೆ ನಾವು ಬಿಡುವುದಿಲ್ಲ. ಉಡುಪಿ – ಕಾಸರಗೋಡು ವಿದ್ಯುತ್ ಮಾರ್ಗದ ವಿಚಾರದಲ್ಲಿ ಮೂರುವರೆ ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರಲಾಗುತ್ತಿದ್ದು, ಮುಂದೆಯೂ ಇದೇರೀತಿ ನಡೆಸಿಕೊಂಡು ಹೋಗಲಾಗುವುದು. ರೈತರ ಕೃಷಿ ಜಮೀನನ್ನು ಬಿಟ್ಟು ಹೆದ್ದಾರಿಯ ಬದಿಯಲ್ಲಿ ಅಥವಾ ಸಮುದ್ರದ ಬದಿಯಲ್ಲಿ ತೆಗೆದುಕೊಂಡು ಹೋಗುವ ಕಾರ್ಯವನ್ನು ಮಾಡಲು ಎಂಬ ಬೇಡಿಕೆಯನ್ನು ಇಡಲಾಗಿದೆ. ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದ್ದು, ಪರ್ಯಾಯ ವ್ಯವಸ್ಥೆಯನ್ನು ನೋಡಲಾಗುವುದು. ಆದರೆ ಏಕಾಏಕಿ ಜಮೀನಿಗೆ ನುಗ್ಗಿ ಸರ್ವೇ ಮಾಡುವುದು, ಹೊಂಡ ತೆಗೆಯುವ ಕಾರ್ಯವನ್ನು ಮಾಡುತ್ತಿದ್ದಾರೆ. ಯಾವ ನ್ಯಾಯಾಲಯದಲ್ಲಿ ಪ್ರಕರಣವನ್ನು ಗೆದ್ದರೂ, ಜನತಾ ನ್ಯಾಯಾಲಯದಲ್ಲಿ ಗೆಲುವು ಸಾಧಿಸಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ರೈತರಿಗೆ ಜನತಾ ನ್ಯಾಯಾಲಯದಲ್ಲಿ ನ್ಯಾಯ ಒದಗಿಸಿ ಉಡುಪಿಯಿಂದ ಓಡಿಸುವ ಕೆಲಸವನ್ನು ರೈತಸಂಘ ಮಾಡಲಿದೆ. ಕೆಲವು ನಿವೃತ್ತ ಪೊಲೀಸ್ ಅಧಿಕಾರಿಗಳು ಕಂಪನಿಯ ಜತೆಗೆ ಸೇರಿಕೊಂಡು ರೈತರ ಮನೆಗೆ ತೆರಳಿ ಹೆದರಿಸುವ ಕಾರ್ಯ ಮಾಡುತ್ತಿರುವುದು ಕಂಡು ಬಂದಿದೆ. ದುಡ್ಡಿನ ಆಮಿಶವನ್ನು ತೋರಿಸಿ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಕೆಲವು ಭಾಗದಲ್ಲಿ ರಾಜಕಾರಣಿಗಳು ಅವರ ಜತೆಗೆ ಶಾಮೀಲಾಗಿರುವ ಸಂಶಯಗಳಿಗೆ ಕಾರಣವಾಗಿದೆ. ೨೦೦ ಲಕ್ಷ ಕೋಟಿ ಸಾಲ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಎಲ್ಲಿ ಮಾಡಿದ್ದಾರೆ ಎಂಬುದನ್ನು ತೋರಿಸಲಿ ಎಂದು ಪತ್ರಿಕಾ ಗೋಷ್ಠಿ ನಡೆಸಿ ತಿಳಿಸಿದರು.

ಉಡುಪಿ ಕಾಸರಗೋಡು ೪೦೦ ಕೆವಿ ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ ಮಾತನಾಡಿ ಕೆ.ಪಿ.ಟಿ.ಸಿ.ಎಲ್. ಇತ್ತೀಚೆಗೆ ಬಿಡುಗಡೆ ಮಾಡಿದ ವಿದ್ಯುತ್ ಮಾರ್ಗದ ನಕ್ಷೆಯಲ್ಲಿ ಉಡುಪಿ ಕಾಸರಗೋಡು ವಿದ್ಯುತ್ ಮಾರ್ಗದ ಗುರುತಿಲ್ಲ. ಇದರಿಂದ ಖಾಸಗೀ ಕಂಪನಿಯ ಯೋಜನೆ ಎಂಬುದು ಸ್ಪಷ್ಟವಾಗುತ್ತಿದೆ. ಕಂಪನಿಯ ಉದ್ದಾರ ಮುಖ್ಯವಲ್ಲ, ರೈತರ ಬದುಕಿನ ಬಗ್ಗೆ ಸರ್ಕಾರ ಯೋಜನೆ ಮಾಡಬೇಕಾಗಿದೆ. ಮೋದಿಯನ್ನು ಎದುರಿಗೆ ತಂದು ಕಂಪನಿಯ ಕೆಲಸವನ್ನು ನಡೆಸಲಾಗುತ್ತಿದೆ. ರೈತರಿಗೆ ದೂರವಾಣಿ ಕರೆ ಮಾಡಿ ದಾರಿ ತಪ್ಪಿಸುವ ಕೆಲಸವನ್ನು ತಕ್ಷಣ ಸ್ಥಗಿತ ಮಾಡಬೇಕು. ತಮಿಳುನಾಡಿನ ಮಾದರಿಯಲ್ಲಿ ಯಾಕೆ ಕರ್ನಾಟಕದಲ್ಲಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ರೈತ ಸಂಘದ ಜಿಲ್ಲಾ ಸಲಹೆಗಾರ ಮುರುವ ಮಹಾಬಲ ಭಟ್, ಸಂತ್ರಸ್ತ ರೈತರಾದ ಅಣ್ಣು ಗೌಡ, ರಾಬರ್ಟ್ ಮಸ್ಕರೇನಿಯಸ್, ಚಿತ್ತರಂಜನ್ ನೆಕ್ಕಿಲಾಡಿ ಮತ್ತಿತರರು ಉಪಸ್ಥಿತರಿದ್ದರು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...