ಬಂಟ್ವಾಳ: ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಮಂಗಳವಾರ (ಎಪ್ರಿಲ್ 27) ರಾತ್ರಿಯಿಂದ 14 ದಿನಗಳವರೆಗೆ ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ.

ಕೊರೋನ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್‍ಡೌನ್ ಅನಿವಾರ್ಯ. ಬೆಂಗಳೂರಿನಲ್ಲಿ ಲಾಕ್‍ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್‍ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗ್ಗೆ 7 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕೃಷಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

