Tuesday, February 3, 2026

ರಾಜ್ಯದಲ್ಲಿ 15 ದಿನ ಲಾಕ್‌ಡೌನ್?

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ರಾತ್ರಿ ಕರ್ಪ್ಯೂ, ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿದ್ದರೂ ಕೊರೋನ ಪ್ರಕರಣ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ರಾಜ್ಯ ಸರಕಾರ ಮುಂದಿನ 15 ದಿನ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಸೋಮವಾರ (ಇಂದು) ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರಕಾರ ಲಾಕ್‌ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಲಸಿಕೆ ಕಾರ್ಯಕ್ರಮದ ಬಗ್ಗೆ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.

ಇಡೀ ದೇಶದಲ್ಲಿ ಅತೀ ಹೆಚ್ಚು ಕೊರೋನ ಸೋಂಕು ಪಾಸಿಟಿವ್ ಆಗುತ್ತಿರುವ ಬೆಂಗಳೂರಿನಲ್ಲಿ ಕನಿಷ್ಠ 2 ವಾರ ಲಾಕ್ ಡೌನ್ ಮಾಡಲೇಬೇಕು ಎಂದು ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆಯೂ ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...