Thursday, June 26, 2025

ಮಗುಸ್ನೇಹಿ ಮನಸ್ಸು ವಿಚಾರದ ಕುರಿತು ಸಂವಾದ ಕಾರ್ಯಕ್ರಮ

ಬಂಟ್ವಾಳ: ಮಕ್ಕಳ ಮಾಸೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ಚಾಳ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಲಯನ್ಸ್ ಕ್ಲಬ್ ಬಂಟ್ಚಾಳ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬಂಟ್ವಾಳ ಸಹಯೋಗದೊಂದಿಗೆ ಮಗುಸ್ನೇಹಿ ಮನಸ್ಸು ವಿಚಾರದ ಕುರಿತು ಸಂವಾದ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ನಿರ್ಮಲ ಹೃದಯ ವಿಶೇಷ ಮಕ್ಕಳ ಪಾಲನಾ ಕೇಂದ್ರದಲ್ಲಿ ಗುರುವಾರ ನಡೆಯಿತು.

ಮಂಗಳೂರಿನ ಮಾನಸಿಕ ಆರೋಗ್ಯ ತಜ್ಞರಾದ ಡಾ. ರವೀಶ್ ತುಂಗ ಮಾಹಿತಿ ನೀಡಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಡರು.

ಕೊರೊನೋತ್ತರ ಕಾಲಘಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳನ್ನು ಹೇಗೆ ಶಿಕ್ಷಕರು ನಿರ್ವಹಿಸಬೇಕು ಎಂಬ ಕುರಿತು ಡಾ.ತುಂಗ ವಿವರಿಸಿದರು. ಹದಿಹರೆಯದ ಮನಸ್ಸು ನಿಯಂತ್ರಣ ದೊಡ್ಡ ಸವಾಲು. ಮನಸ್ಸು ಮತ್ತು ದೇಹದ ಕುರಿತು ವಿಶ್ಲೇಷಿಸಿದ ಅವರು, ಮನಸ್ಸು ಇಡೀ ಶರೀರದಲ್ಲಿದೆ. ಯೋಚನೆ, ಭಾವನೆ, ವರ್ತನೆ ಒಂದಕ್ಕೊಂದು ಹೊಂದಾಣಿಕೆ ಇರಬೇಕು ಎಂದರು.

ಮಕ್ಕಳ ಮಾಸೋತ್ಸವ ಸಮಿತಿ ಜಿಲ್ಲಾ ಸಂಚಾಲಕ ಮಂಜು ವಿಟ್ಲ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಬಂಟ್ಚಾಳ ಅಧ್ಯಕ್ಷ ಡಾ.ವಸಂತ ಬಾಳಿಗಾ ವಹಿಸಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಣಾನೇಶ್, ವೆಲೊರೆಡ್ ಪ್ರತಿಷ್ಟಾನ ಅಧ್ಯಕ್ಷ ರೆನ್ನಿ ಡಿಸೋಜ, ಲಯನ್ಸ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕಿ

ಸುಜಾತಾ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು. ವಿಶೇಷಚೇತನ ಬಾಲಕಿ ಭುವಿಕಾ ಪ್ರಾರ್ಥನೆ ಸಲ್ಲಿಸಿದರು.

ಲಯನ್ಸ್ ನಿರ್ಮಲ ಹೃದಯ ವಿಶೇಷ ಚೇತನ ಮಕ್ಕಳ ಪಾಲನಾ ಕೇಂದ್ರ ಸಂಚಾಲಕ ದಾಮೋದರ್ ಬಿ.ಎಂ. ವಂದಿಸಿದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...