ವಿಟ್ಲ: ಇಂದಿನ ಯುವ ಪೀಳಿಗೆ ಮುಂದಿನ ಜನಾಂಗಕ್ಕೆ ಮಾದರಿಯಾಗಬೇಕು ಮತ್ತು ಉತ್ತಮ ಸಮಾಜ ನೀಡುವಂತಾಗಲಿ ಎಂದು ಚಂದಳಿಕೆ ಶಾಲೆಯ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಅಮ್ಮು ಶೆಟ್ಟಿ ಚಂದಳಿಕೆ ಹೇಳಿದರು.
ಅವರು ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುವ ಎಲ್‌ಕೆಜಿಯುಕೆಜಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ಸಭಾಧ್ಯಕ್ಷತೆ ವಹಿಸಿದ್ದರು. ಸದಸ್ಯ ದೇಜಪ್ಪ ಪೂಜಾರಿ ನಿಡ್ಯ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ಮಂಜುನಾಥ ಕಲ್ಲಕಟ್ಟ, ಹಳೆವಿದ್ಯಾರ್ಥಿ ಸಂಘದ ದೇವಿಪ್ರಸಾದ್ ಶೆಟ್ಟಿ, ಗೌರವಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೇರಿಕೆ, ಇತರ ಪದಾಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಮತ್ತು ಪೂಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಕಾರ್‍ಯಕ್ರಮ ಸಂಯೋಜಿಸಿದರು.
