Saturday, July 12, 2025

ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಇಲ್ಲ: ಸಿಎಂ ಬಿಎಸ್‌ವೈ

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ, ಮತ್ತೊಮ್ಮೆ ಲಾಕ್‌ಡೌನ್‌‌‌‌‌‌‌‌‌ ಜಾರಿ ಮಾಡಬಾರದು ಎಂದರೆ, ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ನಾಗರಿಕರು ಸಹಕರಿಸುವಂತೆ ಸಿ.ಎಂ. ಬಿಎಸ್‌ವೈ ಕೇಳಿಕೊಂಡಿದ್ದಾರೆ.
ಬುಧವಾರ ಸಚಿವ ಬಿ. ಶ್ರೀರಾಮುಲು ಅವರು ಲಾಕ್‌ಡೌನ್‌‌ ಆಗುವ ಸಾಧ್ಯತೆ ಇದೆ ಎನ್ನುವ ಸುಳಿವು ನೀಡಿದ್ದರು.
ಈ ಹಿನ್ನೆಲೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್‌ವೈ, ನಗರದಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜನರಿಗೆ ಮನವಿ ಮಾಡಿದ್ದು, ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳ ಸಚಿವರು, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ಮುಂದುವರಿಸುವುದಾಗಿ ತಿಳಿಸಿದರು.

ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಅಲ್ಲದೇ, ಕೆಲವು ಪ್ರದೇಶಗಳನ್ನು ಸೀಲ್‌ಡೌನ್‌‌‌‌‌ ಮಾಡಿದ್ದೇವೆ. ಮಂತ್ರಿಗಳ ಹಾಗೂ ಅಧಿಕಾರಿಗಳ ಸಭೆ ಕರೆದಿದ್ದು, ಇದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,000 ದಾಟಿದ್ದು, ಈ ಪೈಕಿ ಒಟ್ಟು 170 ಮಂದಿ ಸಾವನ್ನಪ್ಪಿದ್ದಾರೆ. 6,670 ಮಂದಿ ಗುಣಮುಖರಾಗಿದ್ದಾರೆ. ಮೇ. 31ರಂದು ಲಾಕ್‌ಡೌನ್‌‌ -4ರ ಸಂದರ್ಭ ಕರ್ನಾಟಕದಲ್ಲಿ 3,200 ಕೊರೊನಾ ಪ್ರಕರಣಗಳೂ ವರದಿಯಾಗಿತ್ತು. ಇದರಲ್ಲಿ ಬೆಂಗಳೂರಿನಲ್ಲಿ 350ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಜೂನ್‌‌ 24ರಂದು ಅನ್‌ಲಾಕ್‌ -1ರ ವೇಳೆ ಕರ್ನಾಟಕದಲ್ಲಿ ಕೊರೊನಾ ಪ್ರಕರಣವು 10,000 ದಾಟಿದ್ದು, ಬೆಂಗಳೂರಿನಲ್ಲಿ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಒಟ್ಟು 1,600 ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಚರ್ಚೆ ಮಾಡಲು ಸಿಎಂ ಬಿಎಸ್‌ವೈ ಅವರು ಸೋಮವಾರ ತುರ್ತು ಸಭೆ ಕರೆದಿದ್ದು, ಅಧಿಕ ಸೋಂಕು ಪತ್ತೆಯಾಗಿರುವ ಕ್ಲಸ್ಟರ್‌ಗಳಲ್ಲಿ ಲಾಕ್‌ಡೌನ್‌ನ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಕೊರೊನಾ ವೈರಸ್‌‌ ವ್ಯಾಪಿಸುವುದನ್ನು ಪರಿಶೀಲಿಸುವ ಸಲುವಾಗಿ ನಗರದ ಕೆ.ಆರ್‌.ಮಾರ್ಕೆಟ್‌‌‌‌ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯನ್ನು ಬಿಬಿಎಂಪಿ 15 ದಿನಗಳವರೆಗೆ ಸೀಲ್‌ಡೌನ್‌‌ ಮಾಡಿದೆ.

ಎಸ್‌‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ ಪರೀಕ್ಷೆ ಬರೆಯಬೇಕಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ ಸಿ.ಎನ್.ಅಶ್ವಥಾ ನಾರಾಯಣ್, ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್‌.ಅಶೋಕ್‌‌‌, ವಿ.ಸೋಮಣ್ಣ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಭೈರತಿ ಬಸವರಾಜ್‌‌‌‌, ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌‌ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...