Saturday, January 31, 2026

ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ..?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಏರಿಕೆ ಕಂಡ ಬೆನ್ನಲ್ಲೇ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಹೇರಲಾಗಿರುವ ಲಾಕ್ ಡೌನ್ ನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದ್ದು, ಈ ಹಿನ್ನಲೆ ಲಾಕ್ ಡೌನ್ ಮುಂದುವರಿಸುವ ಅಗತ್ಯತೆಯ ಕುರಿತು ನಾಳೆಯೊಳಗೆ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಈ ಬಗ್ಗೆ ಇಂದು ಸಂಜೆ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ನಾಳೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಲಾಕ್ ಡೌನ್ ಕುರಿತಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಒಂದೆಡೆ ಸೋಂಕು ತಡೆಗಟ್ಟಲು ಲಾಕ್ ಡೌನ್ ಒಂದೇ ಪರಿಹಾರವಲ್ಲ ಎನ್ನುವ ಚರ್ಚೆಗಳೂ ಕೇಳಿಬರುತ್ತಿವೆ. ಇನ್ನೊಂದೆಡೆ ಜಿಲ್ಲೆಯ ಜನಪ್ರತಿನಿಧಿಗಳ ಸಹಿತ ಸಾರ್ವಜನಿಕರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸುವಂತೆ ಬೇಡಿಕೆ ಬರುತ್ತಿದೆ. ನಿರಂತರ 7 ದಿನಗಳ ಕಾಲ ಲಾಕ್ ಡೌನ್ ಮಾಡಿದ್ರು, ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಇಳಿಕೆ ಕಾಣದ ಕಾರಣ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೋಟಾ ತಿಳಿಸಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...