Wednesday, July 9, 2025

ಬಂಟ್ವಾಳ: ಇಂದು 8 ಗಂಟೆಯಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಪ್ರಾರಂಭ

ಬಂಟ್ವಾಳ: ಇಂದು 8 ಗಂಟೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ಪ್ರಾರಂಭ. ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಇಂದು ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೆ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ನೀಡಲಾಗಿರುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು , ಸಹಾಯಕ ಆಯುಕ್ತರು, ತಹಶೀಲ್ದಾರ್ ಗೆ ಆದೇಶಿಸಿದ್ದಾರೆ.
ಆಹಾರ ಹಾಗೂ ಹಣ್ಣು ತರಕಾರಿ ಖರೀದಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು , ತುರ್ತು ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಲಾಕ್ ಡೌನ್ ಮಾರ್ಗಸೂಚಿಗಳು ಹೀಗಿವೆ:
* ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
* ಕಂಟೈನ್ ಮೆಂಟ್ ಅಲ್ಲದ ವಲಯಗಳಲ್ಲಿ ಸರ್ಕಾರಿ ಕಚೇರಿಗಳು, ಆರೋಗ್ಯ, ವಿದ್ಯುತ್ , ನೀರು, ವೈದ್ಯಕೀಯ ಶಿಕ್ಷಣ,ಪೊಲೀಸ್, ಸೇರಿದಂತೆ ತುರ್ತು ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ.
* ಮಂಗಳೂರು ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ, ಹಾಗೂ ಜಿಲ್ಲಾಧಿಕಾರಿಗಳ ಮತ್ತು ಅಧೀನ ಕಚೇರಿಗಳು ಕಾರ್ಯನಿರ್ವಹಿಸಬಹುದಾಗಿದೆ.
* ನ್ಯಾಯಾಲಯ ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿ ಕಚೇರಿಗಳು – ಉಚ್ಚ ನ್ಯಾಯಾಲಯ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಕಾರ್ಯ ನಿರ್ವಹಿಸತಕ್ಕದ್ದು
* ಕೋವಿಡ್ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಚೇರಿ ಅಧಿಕಾರಿ ಸಿಬ್ಬಂದಿಗಳು
* ಜಿಲ್ಲಾ ಖಜಾನೆ ಮತ್ತು ಅಧೀನ ಖಜಾನೆ ಕಾರ್ಯ ನಿರ್ವಹಿಸಬಹುದಾಗಿದೆ.

ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮ ಮುಂತಾದವುಗಳು ಮುಚ್ಚಿರತಕ್ಕದ್ದು
ವಿನಾಯಿತಿ
* ರಕ್ಷಣೆ, ಸಶಸ್ತ್ರ, ಪೊಲೀಸ್ ಪಡೆ, ದೂರ ಸಂಪರ್ಕ ಸೇವೆ ಸೇರಿ ಅಗತ್ಯ ಸೇವೆಗಳನ್ನು ನಿರ್ವಹಿಸುವ ಕಚೇರಿಗಳು ತೆರೆದಿರುತ್ತವೆ.
* ಅಂಚೆ ಕಚೇರಿಗಳು, ಬ್ಯಾಂಕ್ ಗಳು, ವೇತನ, ಲೆಕ್ಕಪತ್ರ, ಹಣಕಾಸು ಸಲಹೆಗಾರರು ಹಾಗೂ ಮಹಾ ಲೆಕ್ಕ ನಿಯಂತ್ರಕರ ಕಚೇರಿಗಳು ಕನಿಷ್ಠ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬೇಕಾಗುತ್ತದೆ.
* ಎಲ್ಲಾ ಆರೋಗ್ಯ ಸೇವೆಗಳು ( ಆಯುಷ್ ಮತ್ತು ಪಶು ವೈದ್ಯಕೀಯ ಆಸ್ಪತ್ರೆಗಳು ಕಾರ್ಯನಿರ್ವಹಿಸುವುದು ( ಕಂಟೈನ್ ಮೆಂಟ್ ವಲಯದ ಹೊರಗೆ)
*ಎಲ್ಲ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
*ಕ್ಷೀರ ಸಂಸ್ಕರಣಾ ಕೇಂದ್ರಗಳಿಗೆ ಸಾರಿಗೆ ಮತ್ತು ಪೂರೈಕೆ ಒಳಗೊಂಡಂತೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಸ್ಕರಣೆ ವಿತರಣೆ ಮತ್ತು ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ

ವಾಣಿಜ್ಯ ಮತ್ತು ಖಾಸಗಿ ಸಂಸ್ಥೆ ಮುಚ್ಚಿರತಕ್ಕದ್ದು

ವಿನಾಯಿತಿ

*ಆಹಾರ ,ಹಾಗೂ ಹಣ್ಣು ತರಕಾರಿಗೆ ಖರೀದಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ
ಮಾಧ್ಯಮ ಸಂಸ್ಥೆ , ಬ್ಯಾಂಕ್ , ವಿಮೆ ಕಚೇರಿ ಎಲ್ಲಾ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆ ವಿನಾಯಿತಿ
ಇ – ಕಾಮರ್ಸ್ ಮೂಲಕ ಆಹಾರ, ಔಷಧಿ, ವೈದ್ಯಕೀಯ ಸರಬರಾಜಿಗೆ ಅವಕಾಶ

ಎಲ್ಲಾ ಬಗೆಯ ಸರಕು ಸಾಗಣೆಯ ಗಳ ಅನಿರ್ಬಂಧಿತ ಚಲನೆ

*ಈಗಾಗಲೇ ನಿಗದಿಯಾಗಿರುವ ವಿಮಾನ – ರೈಲು ಪ್ರಯಾಣಕ್ಕೆ ಪ್ರಯಾಣಿಕರಿಗೆ ಅವಕಾಶ

*ಶಾಲೆ , ಕೊಚಿಂಗ್ ಶಾಪಿಂಗ್ ಮಾಲ್ ಹೊಟೇಲ್ , ಧಾರ್ಮಿಕ, ಸಾಮಾಜಿಕ ಸಮಾರಂಭಕ್ಕೆ ನಿಷೇಧ, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಬೇಕು

*ತುರ್ತು ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ

ಒಂದು ವೇಳೆ ಕೊವೀಡ್ ನಿರ್ವಹಣೆಯ ಲಾಕ್ ಡೌನ್ ಕ್ರಮಗಳನ್ನು ಉಲ್ಲಂಘಿಸಿದರೆ, ಯಾವುದೇ ವ್ಯಕ್ತಿಯ ವಿರುದ್ದ ವಿಪತ್ತು ನಿರ್ವಹಣೆಯ ಕಾಯ್ದೆ , ಹಾಗೂ ಭಾರತೀಯ ದಂಡ ಸಂಹಿತೆ 188 ಅಡಿಯಲ್ಲಿ ಕಾನೂನು ಕ್ರಮ ಜರಗಿಸುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...