Wednesday, January 28, 2026

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ: ಡಿ.ಸಿ.ಎಂ. ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ನಿನ್ನೆ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಸಲಹೆ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎಂಬ ವಿಷಯದ ಕುರಿತಂತೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿಯವರು ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದೇವೆ. ಅದರ ಹೊರತಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...