Wednesday, July 9, 2025

ಲಾಕ್ ಡೌನ್ ಎಫೆಕ್ಟ್: ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಕೋಟ್ಯಂತರ ರೂ. ನಷ್ಟ

ಬಂಟ್ವಾಳ: ಲಾಕ್ ಡೌನ್ ಎಫೆಕ್ಟ್ ನಿಂದ ಪ್ರಮುಖ ಧಾರ್ಮಿಕ ಕೇಂದ್ರಗಳ ಆದಾಯಕ್ಕೆ ಕುತ್ತು ತಂದಿದ್ದು, ಕೋಟ್ಯಾಂತರ ರೂ. ನಷ್ಟವುಂಟಾಗಿದೆ.

ಕೊರೊನಾ ಮಹಾಮಾರಿಗೆ ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನ ಗಳಿಗೆ ಕೊಟ್ಯಾಂತರ ರೂ ಆರ್ಥಿಕ ನಷ್ಟವುಂಟಾಗಿದ್ದು , ಅದರಲ್ಲಿ ಕೆಲವು ಪ್ರಮುಖ ದೇವಾಲಯಗಳ ಅಂದಾಜು ನಷ್ಟದ ಲೆಕ್ಕಾಚಾರ ಸಿಕ್ಕಿದೆ.
ರಾಜ್ಯದ ಪ್ರಮುಖ 15 ದೇವಸ್ಥಾನಗಳ ಸರಾಸರಿ ಅಂದಾಜು ಲೆಕ್ಕವನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ನೀಡಿದ್ದು , ಕಳೆದ ಎರಡು ತಿಂಗಳಿನಲ್ಲಿ 89.5 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
ಅದರಲ್ಲಿ ದ.ಕ.ಜಿಲ್ಲೆಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 22 ಕೋಟಿ ನಷ್ಟವುಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
ಉಳಿದಂತೆ ಎಡಯೂರು ದೇವಸ್ಥಾನಕ್ಕೆ 19 ಕೋಟಿ, ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನ ಕ್ಕೆ 10 ಕೋಟಿ, ಮೈಸೂರು ಚಾಮುಂಡಿ ದೇವಸ್ಥಾನಕ್ಕೆ 7 ಕೋಟಿ , ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕ್ಕೆ 7 ಕೋಟಿ , ನಂಜನಗೂಡು ದೇವಸ್ಥಾನ ಕ್ಕೆ 5. ಕೋಟಿ, ಸವದತ್ತಿ ದೇವಸ್ಥಾನ ಕ್ಕೆ 3.5 ಕೋಟಿ, ಮಂದಾರ್ತಿ 2.5 ಕೋಟಿ, ಬನಶಂಕರಿ 2.5 ಕೋಟಿ, ಘಾಟಿ ಸುಬ್ರಹ್ಮಣ್ಯ 2 ಕೋಟಿ, ಹುಲಿಗಮ್ಮ ಕೊಪ್ಪಳ 2.5 ಕೋಟಿ, ಪುತ್ತೂರು ಮಹಾಲಿಂಗೇಶ್ವರ 1.5 ಕೋಟಿ, ಕದ್ರಿ ಮಂಜುನಾಥ ದೇವಾಲಯ ಕ್ಕೆ 3 ಕೋಟಿ, ಅಂಬಲಪಾಡಿ 1 ಕೋಟಿ ಹಾಗೂ ಬಂಟ್ಚಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ 2 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅವರು ಲೆಕ್ಕ ನೀಡಿದ್ದಾರೆ.
ಬಹುತೇಕ ಎಲ್ಲಾ ದೇವಸ್ಥಾನ ಹಾಗೂ ದೈವಸ್ಥಾನಗಳು ಭಕ್ತರ ಆಗಮನವಿಲ್ಲದೆ ಮೌನವಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರನ್ನು ನಂಬಿ ಜೀವನ‌ಮಾಡುತ್ತಿದ್ಧ ಅದೆಷ್ಟು ಕುಟುಂಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣ ವಾಗಿದೆ. ಒಟ್ಟಿನಲ್ಲಿ ಕೊರೊನಾ‌ ಮಹಾಮಾರಿಗೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದಷ್ಟು ಬೇಗ ಕೊರೊನಾ ಸಂಕಷ್ಟ ದೂರವಾಗಿ ಎಲ್ಲವೂ ಹಿಂದಿನಂತೆ ನಡೆಯಲಿ ಎಂಬುದೇ ಎಲ್ಲರ ಆಶಯ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...