ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ.
ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಮಹತ್ವದ ಸಭೆ ನಡೆಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸುದ್ದಿಗೋಷ್ಟಿ ನಿಗದಿ ಮಾಡಲಾಗಿದೆ. ಚುನಾವಣೆ ದಿನಾಂಕ ಘೋಷಣೆಯ ಜೊತೆಗೆ ನಾಳೆ ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.