Thursday, February 13, 2025

ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಕಠಿಣ ತಪಾಸಣೆಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಆರ್‌ಟಿಒ, ಅರಣ್ಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಕಠಿಣ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಇದರೊಂದಿಗೆ ಜಿಲ್ಲೆಯ ಪಾಲನಾ (ಜಾರಿ) ಸಮನ್ವಯದ ನೋಡಲ್‌ ಅಧಿಕಾರಿಗಳಿಗೆ (ಎನ್‌ ಫೋರ್ಸ್‌ಮೆಂಟ್‌ ನೋಡಲ್‌ ಅಧಿಕಾರಿಗಳು) ಈಗಾಗಲೇ ತಮ್ಮ ಇಲಾಖೆಯಿಂದ ನೀಡಲಾದ ಎಸ್‌ಒಪಿಯಂತೆ ಕಾರ್ಯ ನಿರ್ವಹಿಸಬೇಕು. ನೋಡಲ್‌ ಅಧಿಕಾರಿಗಳು ಎಲೆಕ್ಷನ್‌ ಸಿಜರ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ತಂತ್ರಾಂಶದ ಬಗ್ಗೆ ತಿಳಿದುಕೊಳ್ಳಬೇಕು. ಎಫ್‌ಎಸ್‌ಟಿ, ಎಸ್‌ಎಸ್‌ಟಿ ತಂಡಗಳು ನೀಡುವ ವಶಪಡಿಸಿಕೊಂಡ ವಸ್ತುಗಳ ವಿವರವನ್ನು ಈ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಸಹಾಯಕ ಚುನಾವಣ ಅಧಿಕಾರಿಗಳಿಗೆ ವಾಹನದ ಅಗತ್ಯ, ಮಸ್ಟರಿಂಗ್‌, ಡಿ- ಮಾಸ್ಟರಿಂಗ್‌ ಕೇಂದ್ರಗಳು ಹಾಗೂ ಮತದಾನದ ದಿನ ಅಗತ್ಯವಿರುವ ಊಟೋಪಚಾರದ ಅಂದಾಜು ವೆಚ್ಚದ ವಿವರ, ಎಫ್‌ಎಸ್‌ಟಿ, ವಿಎಸ್‌ಟಿ ತಂಡಗಳಿಗೆ ವೀಡಿಯೋ ಮಾಡಲು ಅಗತ್ಯ ಇರುವ ಕೆಮರಾಗಳ ಬಗ್ಗೆ, ಏಕ ಗವಾಕ್ಷಿ ಪದ್ದತಿ ಬಗ್ಗೆ, ಕಂಟ್ರೋಲ್‌ ರೂಂನಲ್ಲಿನ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್‌ ಕುಮಾರ್‌, ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿ ಕಾರಿ ಆಂಟೋನಿ ಮರಿಯಪ್ಪ, ವಾಣಿಜ್ಯ ತೆರಿಗೆ ಇಲಾಖೆಯ ಜೆಸಿಸಿಟಿ ಕುಮಾರ್‌ ನಾಯಕ್‌, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಕವಿತಾ ಶೆಟ್ಟಿ, ಮಂಗಳೂರು ಆದಾಯ ತೆರಿಗೆ ಇಲಾಖೆಯ ಡಿಡಿಐಟಿ ಮಂಜುನಾಥ್‌, ಅಬಕಾರಿ ಇಲಾಖೆಯ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ್‌ ಸಭೆಯಲ್ಲಿದ್ದರು.

ಜಿಲ್ಲೆಯ ಎಲ್ಲ ಸಹಾಯಕ ಚುನಾವಣ ಅಧಿಕಾರಿಗಳು ವೀಡಿಯೋ ಕಾನರೆನ್ಸ್‌ ಮೂಲಕ ಭಾಗವಹಿಸಿದ್ದರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...