ಮಂಗಳೂರು: ದ.ಕ.ಜಿಲ್ಲಾ ಯಿಂದ ಈ ಬಾರಿಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ನಳಿನ್ ಅವರು ಮೂರನೇ ಬಾರಿ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್ ನಿಂದ ಯುವ ನಾಯಕ ಮಿಥುನ್ ರೈ ಅವರಿಗೆ ಪಕ್ಷ ಬಿ.ಪಾರ್ಮ್ ನೀಡಿತು.
ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ತೀವ್ರ ಸ್ವರೂಪದ ಪೈಪೋಟಿ ಯ ಬಳಿಕ ಬಿಜೆಪಿ ಅನುಭವಿ ಹಾಗೂ ಸಂಘಟನ ಚತುರ ನಳಿನ್ ಕುಮಾರ್ ಅವರಿಗೆ ವಿರೋಧ ಗಳ ನಡುವೆಯೂ ಟಿಕೆಟ್ ನೀಡಿದರೆ, ಕಾಂಗ್ರೇಸ್ ನಲ್ಲೂ ಈ ಬಾರಿ ಟಿಕೆಟ್ ಗಾಗಿ ಮುಸುಕಿನ ಗುದ್ದಾಟ ನಡೆದಿತ್ತು. ಮಾಜಿ ಸಚಿವ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಬಿ.ಕೆ.ಹರಿಪ್ರಸಾದ್, ಎಂ.ಎನ್.ರಾಜೇಂದ್ರ ಕುಮಾರ್, ಹಾಗೂ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಅವರ ಹೆಸರು ಕೇಳಿ ಬಂದಿತ್ತು.
ಅಂತಿಮವಾಗಿ ಭಾರೀ ಕುತೂಹಲ ಮೂಡಿಸಿದ್ದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಯ್ಕೆಯಾಗಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ಕೊನೆಗೂ ಇತ್ಯರ್ಥಗೊಂಡಿದೆ.
ದ.ಕ. ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಬಹಳಷ್ಟು ಪ್ರಭಾವಿ ಆಕಾಂಕ್ಷಿಗಳಿದ್ದ ಕಾರಣ ಒಮ್ಮತದ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರನ್ನು ಗುರುವಾರ ದಿಲ್ಲಿಗೆ ಕರೆಸಲಾಗಿತ್ತು. ಅಲ್ಲಿ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ಎರಡು ದಿನಗಳ ಕಾಲ ಕಾಂಗ್ರೆಸ್ ರಾಜ್ಯ ಮತ್ತು ದ.ಕ. ಜಿಲ್ಲಾ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು. ಈ ಸಂದರ್ಭ ಹೊಸ ಮುಖಕ್ಕೆ ಆದ್ಯತೆ ನೀಡಲು ರಾಜ್ಯ ನಾಯಕರು ಆಸಕ್ತಿ ತೋರಿದ್ದರಿಂದ ಮಿಥುನ್ ರೈ ಹೆಸರು ಮುಂಚೂಣಿಗೆ ಬಂದಿತ್ತು. ಅಂತಿಮವಾಗಿ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮೇಲುಗೈ ಸಾಧಿಸಿದ್ದಾರೆ.
