Tuesday, January 27, 2026

ಲೊರೆಟ್ಟೊ ಚರ್ಚ್ ನಲ್ಲಿ ಈಸ್ಟರ್

ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವಾದ “ಈಸ್ಟರ್”ನ್ನು ಲೋರೆಟ್ಟೋ ಮಾತಾ ಚರ್ಚ್ ನಲ್ಲಿ ಬಹಳ ಭಕ್ತಿ, ಶ್ರದ್ಧೆ, ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಪ್ರಧನಾ ಗುರುಗಳಾಗಿ ಚರ್ಚ್ ಧರ್ಮಗುರುಗಳಗಿ ವಂ.ಫ್ರ್ರಾನ್ಸಿಸ್ ಕ್ರಾಸ್ತಾ , ವಂ. ಫೆಲಿಕ್ಸ್ ಲೋಬೊ . ವಂ ಜೋನ್ ಫೆರ್ನಾಂಡಿಸ್‌ ರವರು ನೆರೆದಿದ್ದ ನೂರಾರು ಭಕ್ತಾದಿಗಳೊಂದಿಗೆ ಬಲಿಪೂಜೆ ಅರ್ಪಿಸಿದರು. ವಂ. ಜೋನ್ ಫೆರ್ನಾಂಡಿಸ್ ರವರು ಯೇಸು ಕ್ರಿಸ್ತರ ಪುನರುತ್ಥಾನದ ಮಹತ್ವದ ಬಗ್ಗೆ ಪ್ರವಚನ ನೀಡಿದರು. ಪವಿತ್ರ ವಾರದ ಎಲ್ಲಾ ಪ್ರಾರ್ಥನಾ ವಿಧಿಯನ್ನು ಚರ್ಚ್ ಪಾಲನಾ ಮಂಡಳಿ ಮೆಲುಸ್ತುವರಿಯನ್ನು ವಹಿಸಿತ್ತು. ಕೊರೋನ

ಸೋಂಕಿನ ಸಂದರ್ಭದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು , ಚರ್ಚ್ ಆವರಣದಲ್ಲಿ ದೊಡ್ಡ ಎಲ್ ಇ ಡಿ ಪರದೆ ಯನ್ನೂ ಅಳವಡಿಸಲಾಗಿತ್ತು.

ಸಂಬ್ರಮಾಚರಣೆಗೆ ಸಹಕರಿಸಿದ ಕೊಡುಗೈ ದಾನಿಗಳನ್ನು ಧರ್ಮಗುರುಗಳು ಅಲಂಕರಿಸಿದ ಮೇಣದ ಬತ್ತಿಗಳನ್ನು ನೀಡಿ ಗೌರವಿಸಿದರು. ಸಹಕರಿಸಿದ ಎಲ್ಲರನ್ನೂ ಕೃತಜ್ಞತ ಪೂರ್ವಕವಾಗಿ ಸ್ಮರಿಸಿದರು. ಬಲಿಪೂಜೆಗೆ ಹಾಜರಿದ್ದ ಭಕ್ತಾದಿಗಳಿಗೆ ಫಲಾಹಾರ ನೀಡಲಾಯಿತು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...