ಬಂಟ್ವಾಳ: ಲೊರೆಟ್ಟೊ ಮಾತ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್) ತೆನೆಹಬ್ಬವನ್ನು ಸರಳವಾಗಿ ಆಚರಿಸಲಾಯಿತು.


ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ ಅವರು, ವಂ. ರೊಯ್ಸ್ಟನ್, ಭಕ್ತಾದಿಗಳೊಂದಿಗೆ ಬಲಿ ಪೂಜೆಯನ್ನು ಅರ್ಪಿಸಿದರು. ಸಾಮಾಜಿಕ ಅಂತರದೊಂದಿಗೆ ನಡೆದ ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕೋವಿಡ್ -19 ಸೋಂಕಿನ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪರ ಆದೇಶದಂತೆ ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವುದನ್ನು ರದ್ದು ಪಡಿಸಲಾಗಿತ್ತು.

ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ, ಸಾಮಾಜಿಕ ಅಂತರದಿಂದ ಪಾಲ್ಗೊಳ್ಳಲು ಬೇಕಾದ ಆಸನದ ವ್ಯವಸ್ಥೆಯನ್ನು ಚರ್ಚ್ ವಠಾರದಲ್ಲಿ
ಆಯೋಜಿಸಿ ಎಲ್.ಇ.ಡಿ. ಪರದೆಯನ್ನು ಅಳವಡಿಸಿದ್ದರು. ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಇವತ್ತಿನ ಸಂಭ್ರಮದ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದಿಸಿದರು.












