Wednesday, January 28, 2026

ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿ : ಚಾಲಕನನ್ನು ರಕ್ಷಿಸಿದ ಸ್ಥಳೀಯರು

ಬಂಟ್ವಾಳ: ನಾಯಿಯ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲೋಡಿನ ಲಾರಿಯೊಂದು ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಕೆಲಿಂಜ ಕೊಟ್ಟಾರಿ ಕಟ್ಟೆಯಲ್ಲಿ ಇಂದು ಸಂಜೆ ವೇಳೆ ನಡೆದಿದ್ದು, ಘಟನೆಯಲ್ಲಿ ಲಾರಿ ಚಾಲಕ ಸಿಲುಕಿಕೊಂಡಿದ್ದು ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಕಲ್ಲಡ್ಕದಿಂದ ಪೆರ್ಲ ಕಡೆ ಸಾಗುತ್ತಿದ್ದ ಸಿಮೆಂಟ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದ್ದು, ಚಾಲಕ ಲಾರಿಯೊಳಗೆ ಸಿಲುಕಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಲಾರಿಯೊಳಗೆ ಸಿಲುಕಿಕೊಂಡ ಚಾಲಕನನ್ನು ಸ್ಥಳೀಯರು ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸಿಮೆಂಟ್ ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿತ್ತು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...