Wednesday, July 2, 2025

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಪಲ್ಟಿಯಾದ ಲಾರಿ: ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆಯಿಂದ ಬದಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಸಮೀಪದ ಮಾರ್ನಬೈಲು ಜಂಕ್ಸ್ ನ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ.


ಘಟನೆಯಲ್ಲಿ ಯಾವುದೇ ಪ್ರಾಣ ಅಪಾಯ ಸಂಭವಿಸದೆ ಲಾರಿ ಮಾತ್ರ ಜಖಂ ಗೊಂಡಿದೆ, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ.
ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ.
ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುವ ವೇಳೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಾರ್ನಬೈಲು ಎಂಬಲ್ಲಿ ಮಗುಚಿ ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ರಸ್ತೆ ಬದಿಯಲ್ಲಿ ದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದಿದೆ.
ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ತಂತಿಗಳು ಕಡಿದು ನೆಲಕ್ಕುರುಳಿದೆ.
ಈ ಭಾಗದ ಜನರಿಗೆ ವಿದ್ಯುತ್ ಕಡಿತಗೊಂಡಿದೆ.
ಮೆಸ್ಕಾಂ ಇಲಾಖೆಯವರು ವಿದ್ಯುತ್ ಕಂಬಗಳನ್ನು ಹಾಕಿದ ಬಳಿಕವೇ ಈ ಭಾಗದ ಜನರಿಗೆ ವಿದ್ಯುತ್.
ಲಾರಿ ಮಗುಚಿ ಬಿದ್ದ ವೇಳೆ ಲಾರಿ ಚಾಲಕ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ. ಪಾರಾಗಿದ್ದಾನೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ..

ವಿಟ್ಲ: ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪೇಟೆಯಲ್ಲಿ ಕೆಲವು ದಿನಗಳಿಂದ ಸಮರ್ಪಕ ಸಂಚಾರ ವ್ಯವಸ್ಥೆ ಕಲ್ಪಿಸಿದ್ದು ಮಂಗಳವಾರ ಬೆಳಗ್ಗೆ ಏಕಾಏಕಿ ಅಟೋರಿಕ್ಷಾಗಳು ರಸ್ತೆಯಲ್ಲಿ...

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ – ಯಕ್ಷ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ..

ಬಂಟ್ವಾಳ : ಅವಕಾಶವಂಚಿತ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಕಲಾ ನೈಪುಣ್ಯತೆಯನ್ನು ಬೆಳಗಿಸಿ ಸಂಸ್ಕಾರ ಬದ್ಧ ಬುನಾದಿಯನ್ನು ಹಾಕಿಕೊಡುವ ವಿಶಿಷ್ಟ ಯೋಜನೆ ಯಕ್ಷದ್ರುವ - ಯಕ್ಷ ಶಿಕ್ಷಣವು ಯಕ್ಷ ಧ್ರುವ ಪಟ್ಲ ಫೌಂಡೇಶನ್ (ರಿ) ಇದರ...

ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಗೆ ಜಿಲ್ಲಾ ಮಟ್ಟದ ತ್ರಿವಳಿ ಪ್ರಶಸ್ತಿ..

ಬಂಟ್ವಾಳ: ಕಳೆದ 8 ವರ್ಷಗಳ ಹಿಂದೆ ಅವಿಲ್ ಮಿನೇಜಸ್ ಸ್ಥಾಪಕಾಧ್ಯಕ್ಷತೆ ಯಲ್ಲಿ  ಆರಂಭ ಗೊಂಡ ಇಲ್ಲಿನ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಜಿಲ್ಲೆಯ ಅತ್ಯುನ್ನತ ಡೈಮಂಡ್ ಪ್ಲಸ್ ಸಹಿತ ಜಿಲ್ಲಾ ಮಟ್ಟದ...

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...