Saturday, June 28, 2025

ಚಾಲಕನನ್ನೇ ಬಲಿ ತೆಗೆದುಕೊಂಡ ಲಾರಿ….

ಬಂಟ್ವಾಳ: ಚಾಲಕನನ್ನೇ ಬಲಿತೆಗೆದುಕೊಂಡ ಲಾರಿ…..
ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.
ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಬಾಲಪ್ಪ ಎ.ಜಾವೂರು ಮೃತಪಟ್ಟ ವ್ಯಕ್ತಿ.
ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಪರ್ಲಿಯಾ ಕೊಡಂಗೆ ಎಂಬಲ್ಲಿ ರಸ್ತೆ ಕಾಂಕ್ರೀಟ್ ಕರಣ ಕಾಮಗಾರಿ ನಡೆಯುತ್ತಿದ್ದು ಪ್ರಸ್ತುತ ಕಾಮಗಾರಿ ಪೂರ್ಣಗೊಂಡಿದೆ.
ಈ ರಸ್ತೆ ಕಾಂಕ್ರೀಟ್ ಕರಣ ಕಾಮಗಾರಿಯ ಅವಧಿಯಲ್ಲಿ ಕೊಡಂಗೆ ಎಂಬಲ್ಲಿ ಖಾಲಿ ಜಾಗದಲ್ಲಿ ಜಲ್ಲಿ ರಾಶಿ ಹಾಕಲಾಗಿದ್ದು, ಕಾಮಗಾರಿಯ ಬಳಿಕ ಅಲ್ಲಿ ಉಳಿದ ಜಲ್ಲಿ ಕಲ್ಲುಗಳನ್ನು ಬೇರೆ ಕಾಮಗಾರಿಯ ಪ್ರದೇಶಕ್ಕೆ ಕೊಂಡು ಹೋಗುವ ಉದ್ದೇಶದಿಂದ ಬಾಲಪ್ಪ ಅವರು ಲಾರಿ ಯನ್ನು ಜಲ್ಲಿ ಲೋಡ್ ಮಾಡಲು ಕೊಡಂಗೆಯಲ್ಲಿ ನಿಲ್ಲಿಸಿದ್ದರು.
ಲಾರಿ ನಿಲ್ಲಿಸಿ ಅಲ್ಲೇ ಪಕ್ಕ ದಲ್ಲಿ ಮೊಬೈಲ್ ಫೋನ್ ಸಂಭಾಷಣೆ ಯಲ್ಲಿ ತೊಡಗಿದ್ದ ಬಾಲಪ್ಪ ಅವರಿಗೆ ಲಾರಿ ನಿಧಾನವಾಗಿ ಮುಂದೆ ಚಲಿಸುತ್ತಿರುವ ಬಗ್ಗೆ ಜಲ್ಲಿ ಲೋಡ್ ಮಾಡುವ ಜೆಸಿಬಿ ಚಾಲಕ ಜೋರಾಗಿ ಹೇಳಿದಾಗ ತನ್ನಿಂದ ತಾನೇ ಚಲಿಸುವ ಲಾರಿ ಯನ್ನು ತಡೆಯಲು ಚಕ್ರದಡಿ ಕಲ್ಲು ಇಡುವ ಪ್ರಯತ್ನ ಕ್ಕೆ ಮುಂದಾದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...