Wednesday, February 12, 2025

ಲಾರಿ ಚಾಲಕನ ಎಡವಟ್ಟು, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಬೈಕುಗಳು ಜಖಂ

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರವಾಹನಗಳ ಮೇಲೆ ಘನಗಾತ್ರದ ಲಾರಿಯೊಂದು ಹರಿದು ಬೈಕಗಳು ಅಪ್ಪಚ್ಚಿಯಾದ ಘಟನೆ
ಬೆಂಜನಪದವು ಸಮೀಪದ ಕೊಡ್ಮಾನ್ ಕೋಡಿ ಎಂಬಲ್ಲಿ ನಡೆದಿದೆ.


ಯಾವುದೋ ಉದ್ದೇಶದಿಂದ ಬೆಂಜನಪದವು ಗುಡ್ಡವೊಂದಕ್ಕೆ ಬಂದಿದ್ದ ಕಾರೊಂದು ಚಾಲಕನ ಎಡವಟ್ಟಿನಿಂದ ಗುಂಡಿಗೆ ಬಿದ್ದಿತ್ತು.
ಗುಂಡಿಗೆ ಬಿದ್ದ ಕಾರನ್ನು ಎತ್ತಿ ಮೇಲೆಕ್ಕೆ ತರುವ ಉದ್ದೇಶದಿಂದ ಕಾರು ಮಾಲಕನಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಎರಡು ಬೈಕ್ ಗಳಲ್ಲಿ ಬಂದ ಯುವಕರು ಬೈಕನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು.
ಕಾರುನ್ನು ಎತ್ತಲು ಹೋದ ವೇಳೆ ಬೆಂಜನಪದವು ಕಡೆಯಿಂದ ಮಾರಿಪಳ್ಳ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಬೈಕಗಳ ಮೇಲೆ ಹರಿದಿದೆ.
ಘನಗಾತ್ರದ ಲಾರಿ ಬೈಕುಗಳ ಮೇಲೆ ಹರಿದ ಪರಿಣಾಮವಾಗಿ ಬೈಕುಗಳು ಸಂಪೂರ್ಣ ಜಖಂಗೊಂಡಿದೆ. ಬೈಕ್ ತನ್ನ ಮೂಲ ಆಕಾರವನ್ನು ಕಳೆದುಕೊಂಡು ಮುದ್ದೆಯಾಗಿದೆ.
ಬೆಂಜನಪದವು ಕಡೆಯಿಂದ ತಮಿಳುನಾಡಿಗೆ ಮಣ್ಣು ಸಾಗಾಟ ಮಾಡುವ ತಮಿಳುನಾಡು ಮೂಲದ ಬೃಹತ್ ಗಾತ್ರದ ಲಾರಿ,ಮಣ್ಣು ತುಂಬಿಸಿಕೊಂಡು ಬೆಂಜನಪದವು ಕಡೆಯಿಂದ ಬಿಸಿರೋಡಿನ ಕೈಕಂಬ ರಸ್ತೆಗೆ ತೆರಳಬೇಕಿತ್ತು.ಚಾಲಕನಿಗೆ ರಸ್ತೆಯ ಅಂದಾಜು ಇಲ್ಲದೆ, ದಾರಿ ತಪ್ಪಿ ಮಾರಿಪಳ್ಳ ರಸ್ತೆಯಲ್ಲಿ ಸಾಗಿದ್ದಾನೆ.
ಈ ವೇಳೆ ತಿರುವಿನಲ್ಲಿ ಅಧಿಕ ಲೋಡ್ ಹೊಂದಿದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳೆರಡನ್ನು ಎಳೆದುಕೊಂಡು ಹೋಗಿ, ಟೋಟಲ್ ಲಾಸ್ ಗೆ ಹಾಕುವಂತೆ ಪುಡಿಪುಡಿ ಮಾಡಿದೆ.
ಲಾರಿ ಚಾಲಕನ ಅಜಾಗರೂಕತೆಯ ಚಾಲನೆಗೆ ಗ್ರಾಮಸ್ಥರು ಗರಂ ಆಗಿದ್ದು, ಸ್ಥಳದಲ್ಲಿ 112 ಪೋಲೀಸ್ ವಾಹನ ಹಾಗೂ ಎ.ಎಸ್.ಐ.
ಮೋನಪ್ಪ ಗೌಡ ಹಾಗೂ ಚಾಲಕ ವಿಶ್ವನಾಥ ಭೇಟಿ ನೀಡಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...