ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.
ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ.
ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ.
ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

