Wednesday, January 28, 2026

ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶಾಸಕ ರಾಜೇಶ್ ನಾಯ್ಕ್ ದಿಢೀರ್ ಭೇಟಿ; ಪರಿಶೀಲನೆ

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಅವರು ಮಂಗಳವಾರ ಸಂಜೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಹಠಾತ್ ಭೇಟಿ ನೀಡಿ ಕೆಲವೊಂದು ವ್ಯವಸ್ಥೆಗಳ ಕುರಿತು ತಾಲೂಕು ವೈದ್ಯಾಧಿಕಾರಿಯವರಿಂದ ಮಾಹಿತಿ ಪಡೆದರು.

166 ಮಂದಿಗೆ ಲಸಿಕೆ : ತಾಲೂಕು ಸರಕಾರಿ  ಆಸ್ಪತ್ರೆಯಲ್ಲಿ  18 ವರ್ಷ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಮಂಗಳವಾರ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಒಟ್ಟು 170 ಮಂದಿ ಲಸಿಕೆ ಪಡೆಯಲು ನೊಂದಣಿ ಮಾಡಲಾಗಿದ್ದು,ಈ ಪೈಕಿ 166 ಮಂದಿ ಲಸಿಕೆ ಪಡೆದಿದ್ದಾರೆ ಎಂದು     ವೈದ್ಯಾಧಿಕಾರಿ  ಡಾ.ಪುಪ್ಪಲತಾ ಅವರು ಶಾಸಕರಿಗೆ ಮಾಹಿತಿ ನೀಡಿದರು.

23 ಮಂದಿ ದಾಖಲು: ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 23 ಮಂದಿ ಕೋವಿಡ್ ಸೋಂಕಿತ ರೋಗಿಗಳು ದಾಖಲಾಗಿದ್ದು ,ಇವರ ಮಾಹಿತಿ ಪಡೆದ ಶಾಸಕ ರಾಜೇಶ್ ನಾಯಕ್ ಅವರ ಯೋಗಕ್ಷೇಮವನ್ನು ವಿಚಾರಿಸಿದರಲ್ಲದೆ ಅವರಿಗೆ ನೀಡಲಾಗುವ ಊಟೋಪಾಚಾರ,ಔಷಧದ ಕುರಿತು ಮಾಹಿತಿ ಪಡೆದು,ಯಾವುದೇ ರೀತಿಯ ಕೊರತೆಯಾಗದ ರೀತಿಯಲ್ಲಿ ನೋಡಿಕೊಳ್ಳುವಂತೆ ಹಾಗೂ ಅವಶ್ಯವಿದ್ದರೆ ನೇರ ತನ್ನನ್ನು ಸಂಪರ್ಕಿಸುವಂತೆ ಶಾಸಕರು   ವೈದ್ಯಾಧಿಕಾರಿಯವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಡಾ. ವೇಣುಗೋಪಾಲ್, ಡಾ. ಕಿಶೋರ್ ಕುಮಾರ್, ಡಾ. ಸೌಮ್ಯ, ಡಾ. ಪಾವನ ಅವರು ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...