ಮಾಣಿ: ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಜ.19(ನಾಳೆ) ರಂದು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ವೇದಮೂರ್ತಿ ಶ್ರೀ ಸೀತಾರಾಮ ನೂರಿತ್ತಾಯರ ಮಾರ್ಗದರ್ಶನದಲ್ಲಿ ಪ್ರತಿಷ್ಠಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಚಂಡಿಕಾ ಹೋಮ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರ ಪ್ರಯುಕ್ತ ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ಜ.20 ರಂದು ಸೋಮವಾರ ಸಂಜೆ 6 ಗಂಟೆಗೆ ಮಾಣಿ ಗಾಂಧಿ ಮೈದಾನದಲ್ಲಿ ‘ಕೃಷ್ಣ ಕೃಷ್ಣ ಶ್ರೀ ಕೃಷ್ಣ’ ಎಂಬ ಪೌರಾಣಿಕ ಕಥಾ ಬಾಗದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದ್ದಾರೆ.


