Saturday, January 31, 2026

ಪೆ.28(ನಾಳೆ): ಮಾಣಿಯಲ್ಲಿ ಜನಜಾಗೃತಿ ಸಮಾವೇಶ

ವಿಟ್ಲ: ಮಾಣಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ‘ಸಂವಿಧಾನ ರಕ್ಷಿಸಿ,ದೇಶ ಉಳಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸಂವಿಧಾನ ವಿರೋಧಿ ಕರಾಳ ಕಾನೂನನ್ನು ಹಾಗೂ ದೇಶದ ಉದ್ದಗಲಕ್ಕೂ ಫ್ಯಾಸಿಸ್ಟ್ ಶಕ್ತಿಗಳಿಂದ ನಡೆಯುತ್ತಿರುವ ಕಗ್ಗೊಲೆಗಳನ್ನು ಖಂಡಿಸಿ ಪೆ.28 ರಂದು(ನಾಳೆ) ಮಧ್ಯಾಹ್ನ 2:30 ಕ್ಕೆ ಮಾಣಿಯ ಗಾಂಧಿ ಮೈದಾನದಲ್ಲಿ ಬೃಹತ್ ಜನ ಜಾಗೃತಿ ಸಮಾವೇಶ ನಡಯಲಿದೆ.
ಸುದ್ದಿ ಟಿವಿ ಸಂಪಾದಕ ಶಶಿಧರ್ ಭಟ್, ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ದ್ವಾರಕನಾಥ್, ಪ್ರಗತಿಪರ ಹೋರಾಟಗಾರ
ಬಿ. ಆರ್. ಬಾಸ್ಕರ್ ಪ್ರಸಾದ್ ಬೆಂಗಳೂರು, ಮೈಸೂರು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮಿಜಿ, ಮಾಜಿ ಸಚಿವ ಬಿ. ರಮಾನಾಥ ರೈ, ನಿವೃತ್ತ ಪೋಲಿಸ್ ಅಧಿಕಾರಿ ಜಿ.ಎ. ಬಾವ, ಜೆ.ಡಿ.ಎಸ್. ಮುಖಂಡ ಯಮ್.ಬಿ. ಸದಾಶಿವ ಸುಳ್ಯ, ಅಬ್ದುಲ್
ಅಝೀಝ್ ದಾರಿಮಿ ಚೊಕ್ಕಬೆಟ್ಟು, ಯಾಕುಬ್  ಸಹದಿ ಬೆಳ್ತಂಗಡಿ, ಪ್ರಗತಿಪರ ಹೋರಾಟಗಾರ್ತಿ ನೇಮಿ ಚಂದ್ರ ಬೆಳಗಾಂ,
ಪಿ.ಎಫ್.ಐ ಮುಖಂಡ ಅಡ್ವೊಕೇಟ್ ಅಮೀನ್ ಮೊಹ್ಸೀನ್‌, ಸಾಮಾಜಿಕ ಹೋರಾಟಗಾರ ಹನೀಫ್ ಖಾನ್ ಕೊಡಾಜೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರಕಟಣೆ ತಿಳಿಸಿದೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...