ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಜ.19ನೇ ಶನಿವಾರ ಬ್ರಹ್ಮ ಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ವೇದಮೂರ್ತಿ ಶ್ರೀ ಸೀತಾರಾಮ ನೂರಿತ್ತಾಯರ ಮಾರ್ಗದರ್ಶನದಲ್ಲಿ ಪ್ರತಿಷ್ಠಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆ ಪ್ರಯುಕ್ತ ವಿಶೇಷ ಸೇವೆಯಾಗಿ ಚಂಡಿಕಾಹೋಮ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಮಾಡಲಾಗುವುದು. ಹಾಗೂ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಪ್ರತಿಷ್ಠಾ ದಿನಾಚರಣೆಯ ಪ್ರಯುಕ್ತ ಜ.20ರಂದು ಸಂಜೆ 6ರಿಂದ ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ಮೇಧಿನಿ ನಿರ್ಮಾಣ-ಮಹಿಷ ವಧೆ ಎಂಬ ಪೌರಾಣೆಕ ಕಥಾಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿತೋರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
