Tuesday, January 27, 2026

*ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಗೆ ಚಪ್ಪರ ಮುಹೂರ್ತ ಮತ್ತು ಪ್ರಥಮ ಚೆಂಡು*

ಬಂಟ್ವಾಳ : ಫೆ.6 ರಂದು ನಡೆಯಲಿರುವ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ಪ್ರಯುಕ್ತ ಪೂರ್ವಭಾವಿ ಯಾಗಿ ಮಾಣಿ ಉಳ್ಳಾಲ್ತಿ ದೈವಸ್ಥಾನದ ಅಂಗಣಕ್ಕೆ ಚಪ್ಪರ ಮುಹೂರ್ತ ಇಂದು ಬೆಳಿಗ್ಗೆ ಸುಮಾರು ಹತ್ತು ಗಂಟೆಯ ವೇಳೆ ನಡೆಯಿತು.

ಪಳನೀರು ಅನಂತ ಭಟ್ ಅವರ ಪೌರೋಹಿತ್ಯ ದಲ್ಲಿ ವಿಧಿಬದ್ದವಾಗಿ ಚಪ್ಪರ ಮೂಹೂರ್ತ ನಡೆದ ಬಳಿಕ ಮಾಣಿ ಉಳ್ಳಾಲ್ತಿ ಮೆಚ್ಚಿ ಗೆ ಅಣಿ ಕಟ್ಟಲು ಬೇಕಾಗುವ ಅಡಿಕೆ ಹಾಲೆಯನ್ನು ತರಲು ಸಂಪ್ರದಾಯದಂತೆ ಕೆದಿಲ ಮನೆಗೆ ತೆರಳಿ , ಅಲ್ಲಿಂದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಒಂದೇ ಅಡಿಕೆ ಮರದಿಂದ ಒಂದು ಹಾಲೆ ಹಿಂಗಾರ, ಒಂದು ಕಿಲೆ ಅಡಿಕೆ, ಒಂದು ಅಡಿಕೆ ಹಾಲೆಯನ್ನು ತೆಗೆದು ಮೂಹೂರ್ತ ಮಾಡಲಾಗುತ್ತದೆ, ಬಳಿಕ ಬೇಕಾಗುವಷ್ಟು ಹಾಲೆಯನ್ನು ಸಂಗ್ರಹಿಸಲಾಗುತ್ತದೆ.

ಅಲ್ಲಿಂದ ತರಿಸಲಾದ ಹಾಲೆಗೆ ಪೌರೋಹಿತ್ಯ ನಡೆದ ಬಳಿಕ ಬಾಕಿಮಾರು ಗದ್ದೆಯಲ್ಲಿ ಪ್ರಥಮ ಚೆಂಡು ಇಂದು ನಡೆಯಿತು.

ಇಂದಿನಿಂದ ಮೂರು ದಿನಗಳ ಕಾಲ ಬಾಕಿಮಾರು ಗದ್ದೆಯಲ್ಲಿ ಚೆಂಡು ಹಾಕುವ ಕಾರ್ಯ ಕ್ರಮ ಸಂಪ್ರದಾಯದಂತೆ ನಡೆಯುತ್ತದೆ.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...