Thursday, June 26, 2025

*ಮಾಣಿ ವಲಯ ಬಂಟರ ಸಂಘ: ಅಭಿನಂದನಾ ಸಮಾರಂಭ, ನೂತನ ಲಾಂಛನ ಬಿಡುಗಡೆ*

ಬಂಟ್ವಾಳ: ಸಾಮರಸ್ಯದಿಂದ ಸಂಘಟನೆಯನ್ನು ಬಲಪಡಿಸಬಹುದು. ಆರ್ಥಿಕವಾಗಿ ಹಿಂದುಳಿದವರ ಬಗ್ಗೆ ಚಿಂತಿಸಿ ಅವರಿಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಮಾಣಿ ವಲಯ ಬಂಟರ ಸಂಘದ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಮಾಜಿ ಉಪಾಧ್ಯಕ್ಷೆ ಕಲ್ಲಾಜೆಗುತ್ತು ಪ್ರಫುಲ್ಲ ಆರ್ ರೈ ಹೇಳಿದರು.

ಅವರು ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಜರಗಿದ ಅಭಿನಂದನಾ ಸಮಾರಂಭ ಮತ್ತು ನೂತನ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಾಣಿ ವಲಯ ಬಂಟರ ಸಂಘದ ಗೌರವಾಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ ಇವರು ವಹಿಸಿದ್ದರು.

ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿಯವರು ಸಂಘದ ನೂತನ ಲಾಂಛನ ಬಿಡುಗಡೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿಯವರು ಭಾಗವಹಿಸಿದ್ದರು.

ಸಂಘದ ನಿಯೋಜಿತ ಅಧ್ಯಕ್ಷರಾದ ಬಿ.ಎಂ.ಗಂಗಾಧರ ರೈಯನರು ಮಾತನಾಡಿ, ಮುಂದಿನ ಅವಧಿಗೆ ಎಲ್ಲರ ಸಹಕಾರ ಯಾಚಿಸಿದರು.

ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ, ರಾಜ್ಯ ರೈತರತ್ನ ಪ್ರಶಸ್ತಿ ವಿಜೇತ ನಾಗರಾಜ ಶೆಟ್ಟಿ ಸಾಗು ಮತ್ತು ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತರಾದ ಉದಯ ರೈ ಮಂದಾರ ಇವರನ್ನು ಸನ್ಮಾನಿಸಲಾಯಿತು.

ವಲಯದ ನೂತನ ಪಂಚಾಯತ್ ಸದಸ್ಯರು ಮತ್ತು ಸಹಕಾರ ಸಂಘದ ನಿರ್ದೇಶಕರನ್ನು ಗೌರವಿಸಲಾಯಿತು. ಕಳೆದ ಸಾಲಿನ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಂಘದ ನೋಂದಣಿಯಲ್ಲಿ ಸಹಕರಿಸಿದ ನ್ಯಾಯವಾದಿ ಪ್ರೇಮನಾಥ್ ಶೆಟ್ಟಿ, ನೂತನ ಲಾಂಛನದ ವಿನ್ಯಾಸದಲ್ಲಿ ಸಹಕರಿಸಿದ ರವಿಕಿರಣ್ ರೈ ಮತ್ತು ಸುಜಿತ್ ರೈ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯಲ್ಲಿ ಸಂಘದ ನಿಕಟಪೂರ್ವಾಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಪದಾಧಿಕಾರಿಗಳಾದ ವಿಶ್ವನಾಥ ರೈ ಬಾಲ್ಯೊಟ್ಟು, ಮಮತಾ ಆಳ್ವ, ರತ್ನಾಕರ ರೈ ಶಬರಿ, ಸಜಿತ್ ಶೆಟ್ಟಿ ಜಡ್ತಿಲ, ನಿರಂಜನ್ ರೈ ಕುರ್ಲೆತ್ತಿಮಾರು, ಸುಖೇಶ್ ರೈ ಅಮೈ, ವಿನಿತ್ ಶೆಟ್ಟಿ ಪೆರಾಜೆ, ವಿಂದ್ಯಾ ರೈ, ವಿನಿತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಮೋಹಿನಿ ರೈ, ಜ್ಯೋತಿ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಪ್ರವೀಣ್ ರೈ ಕಲ್ಲಾಜೆ ಸ್ವಾಗತಿಸಿದರು. ಪ್ರಾಂಶುಪಾಲರಾದ ಗಂಗಾಧರ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ವಿಜೇತ್ ರೈ ಬಿಳಿಯೂರು ವಂದಿಸಿದರು. ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ.ವಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...