Wednesday, February 12, 2025

ಗ್ರಾ.ಪಂ.ಸದಸ್ಯನಿಂದ ಮಾಣಿಯಲ್ಲಿ ದರೋಡೆ ಹಾಗೂ ಹಲ್ಲೆ ನಡೆಸಿ ಜೀವ ಬೆದರಿಕೆ : ಪ್ರಕರಣ ದಾಖಲು

ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್ ಹಾಗೂ ಆತನ ಪತ್ನಿ ಶಾಂತಿ ಮಾರ್ಟಿಸ್ ಇಬ್ಬರೂ ಆರೋಪಿಗಳು ಸೇರಿ ವ್ಯಕ್ತಿಯ ಕುತ್ತಿಗೆಯಲ್ಲಿದ್ದ 5 ಪವನ್ ಚಿನ್ನದ ಸರ, ಪರ್ಸ್ ನಲ್ಲಿದ್ದ ಹಣವನ್ನು ದರೋಡೆ ಗೈದು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ನಲ್ಲಿ ನಡೆದಿದೆ.

ಮಾಣಿ ಗ್ರಾಮದ ಲಕ್ಕಪ್ಪರ ಕೋಡಿ ನಿವಾಸಿ ಸ್ಟೀವನ್ ಆಲ್ವಿನ್ ಪಾಯ್ಸ್ ಎಂಬವರು ದಿನಾಂಕ 05-03-2024 ರಂದು ಬೆಳಗ್ಗೆ ಅವರ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿದ್ದ ಸಮಯ ಬಂಟ್ವಾಳ ತಾಲೂಕು ಮಾಣಿ ಗ್ರಾಮಾದ ಮಾಣಿ ಜಂಕ್ಷನ್ ಗೆ ತಲುಪಿದಾಗ ಕಾರಿನಲ್ಲಿ ಬಂದ ಆರೋಪಿಗಳು ಸ್ಟೀವನ್ ರವರನ್ನು ತಡೆದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುತ್ತಾರೆ. ಬಳಿಕ ಸ್ಟೀವನ್ ರವರ ಕುತ್ತಿಗೆಯಲ್ಲಿದ್ದ ಐದು ಪವನ್ ಚಿನ್ನದ ಸರ ಇದರ ಅಂದಾಜು ಮೌಲ್ಯ ರೂಪಾಯಿ ಎರಡು ಲಕ್ಷ ಮತ್ತು ಪರ್ಸ್ ನಲ್ಲಿದ್ದ 18,000/- ರೂಪಾಯಿ ಹಣವನ್ನು ದರೋಡೆ ಗೈದು ಅವ್ಯಾಚವಾಗಿ ನಿಂದಿಸಿ ಪರಾರಿಯಾಗಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 34/2024 ಕಲಂ: 341, 355, 323, 504, 506, 392 R/w 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...