Monday, January 26, 2026

ವಿನೂತನ ಶೈಲಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ ಮಾಣಿ ಯುವಕ ಮಂಡಲದ ಸದಸ್ಯರು

ಮಾಣಿ:  ಮಾಣಿ ಯುವಕ ಮಂಡಲದ ಸದಸ್ಯರು ದೀಪಾವಳಿ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದರು, ತಾವು ದಿನ ನಿತ್ಯ ಕಬಡ್ಡಿ ಆಟ ಆಡುವ ಕಬಡ್ಡಿ ಅಂಕಣವನ್ನು ದೀಪದಿಂದ ಅಲಂಕರಿಸಿ ಕಬಡ್ಡಿ ಅಂಕಣಕ್ಕೆ ಪೂಜೆ ಮಾಡಿ ಪಟಾಕಿ ಸಿಡಿಸಿ ವಿಜೃಂಭಿಸಿದರು.

ಮಾಣಿ ಯುವಕ ಮಂಡಲ ಎಲ್ಲಾ ಕ್ಷೇತ್ರದಲ್ಲೂ ಮಿಂಚುತ್ತಿದ್ದು ಹತ್ತು ಹಲವು ಸಾಮಾಜಿಕ ಸೇವೆ ಸಾಂಸ್ಕೃತಿಕ , ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮಿಂಚುತ್ತಿದೆ, ಈ ವಿನೂತನ ಶೈಲಿಯ ಕಾರ್ಯಕ್ರಮದಲ್ಲಿ ಮಾಣಿ ಯುವಕ ಮಂಡಲದ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಸದಸ್ಯರಾದ ಜಗದೀಶ್ ಪೂಜಾರಿ, ಮಜೀದ್ ಮಾಣಿ, ವಸಂತ್ ಶೆಟ್ಟಿ, ಸಂದೀಪ್, ಹರ್ಷಿತ್, ಧೀರಜ್, ಧನುಷ್, ಪ್ರಥ್ವಿಕ್, ಲಿಕಿತ್, ರಕ್ಷಣ್, ವಿಜಿತ್, ಅಕ್ಷತ್, ಅವಿನಾಶ್, ಅಕ್ಷಿತ್, ಮನೀಶ್, ವಿಶಾಲ್, ಶಿವಪ್ರಸಾದ್, ಆಶಿಷ್, ಅಕ್ಷಯ್ ಮುಂತಾದವರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...