Thursday, February 13, 2025

ಮಾ.08 ರಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ

ಯುವವಾಹಿನಿ (ರಿ.)ಮಾಣಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ದಿನಾಂಕ 8-3-2024 ನೇ ಶುಕ್ರವಾರ ಬೆಳಿಗ್ಗೆ ಗಂಟೆ 9-30 ಕ್ಕೆ ಸರಿಯಾಗಿ ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವಯಲ್ಲಿ ಯುವ ವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.)ಮಾಣಿ ಯ ಮಹಿಳಾ ಅಧ್ಯಕ್ಷ ಹರಿನಾಕ್ಷಿ ಮುರುವ ಮಾಡಲಿದ್ದು,ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರುನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ್, ಕೂಡಪದವು ಶಾಲಾ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಆರತಿ ದಾಸಪ್ಪ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.)ಮಾಣಿ ಯ ಅಧ್ಯಕ್ಷರಾದ ಸುರೇಶ್ ಸೂರ್ಯ, ಯುವವಾಹಿನಿ( ರಿ.) ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಮೊದಲಾದವರು ಭಾಗವಹಿಸಲಿರುವರು. ಸಂಪನ್ಮೂಲ ವ್ಯಕ್ತಿಗಳಾಗಿ “ಸ್ವಸ್ಥ ಮಹಿಳೆ- ಸ್ವಸ್ಥ ಮನೆ” ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್, “ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ “ಎಂಬ ವಿಷಯದ ಬಗ್ಗೆವಕೀಲರು ನೋಟರಿ ಆದ ಶೋಭಾ ಲತಾ ಸುವರ್ಣ ವಿಚಾರ ವಿನಿಮಯ ಮಾಡಲಿರುವರು ಎಂದು ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮಜಲ್ ತಿಳಿಸಿರುತ್ತಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...