ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಫೆ.24 ರಿಂದ ಫೆ.26 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ತಿಳಿಸಿದ್ದಾರೆ.

ದೈವೈಕ್ಯ ಶ್ರೀ ತನಿಯಪ್ಪ ಗುರುವರ್ಯರಿಂದ ಸ್ಥಾಪನೆಗೊಂಡ ಕ್ಷೇತ್ರದ ಮೂಲಕ ನಾನಾ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ.
ಈ ಬಾರಿ ನಡೆಯುವ ಜಾತ್ರೋತ್ಸವದ ಅಂಗವಾಗಿ ಫೆ.24 ರಂದು ಗಣಪತಿ ಹೋಮ, ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಫೆ.25 ರಂದು ತುಲಾಭಾರ ಸೇವೆ, ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತಿ ಪ್ರಧಾನ ನಾಟಕ ಪ್ರದರ್ಶನಗೊಳ್ಳಲಿದೆ.
ಬಳಿಕ ಸಿರಿ ಕುಮಾರ ಸೇವೆ, ಶ್ರೀ ರಕ್ತೇಶ್ವರಿ ದೈವದ ನೇಮೋತ್ಸವ ನಡೆಯಲಿದೆ.
ಫೆ.26 ರಂದು ಶ್ರೀ ದೇವಿಯ ಮಹಾಪೂಜೆ, ದರ್ಶನ ಬಲಿ ಉತ್ಸವ, ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.