Saturday, July 12, 2025

ಮಡಂತ್ಯಾರು ಹಾ.ಉ. ಸಂಘ: ಆಡಳಿತ ಮಂಡಳಿಯ ಸಭೆ

ಬೆಳ್ತಂಗಡಿ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ 2020ನೇ ಸಾಲಿನ ಎಪ್ರೀಲ್ ತಿಂಗಳಲ್ಲಿ ಸಂಘಕ್ಕೆ ಹಾಲು ಪೂರೈಸಿದ ಎಲ್ಲಾ ಸದಸ್ಯರಿಗೆ ಲೀಟರ್ ಗೆ 1 ರೂಪಾಯಿಯಂತೆ ಒಟ್ಟು 62,000 ರೂ. ಪ್ರೋತ್ಸಾಹಧನ ಹಾಗೂ ಸಿಬಂದಿಗಳಿಗೆ ಒಟ್ಟು 5000 ರೂ. ಪ್ರೋತ್ಸಾಹಧನವನ್ನು ನೀಡಲು ನಿರ್ಧರಿಸಲಾಯಿತು.

ಇಂದು ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ದೇಶಕರೆಲ್ಲರೂ ಸೇರಿ ತೆಗೆದುಕೊಂಡ ನಿರ್ಣಯದಂತೆ ಸದಸ್ಯರಿಗೆ, ಸಂಘದ ಸಿಬಂದಿಗಳಿಗೆ ಪ್ರೋತ್ಸಾಹಧನ ಹಾಗೂ ಸಂಘದ ಸದಸ್ಯರು ಮಾಡುವ ಒಕ್ಕೂಟದ ಜಾನುವಾರು ವಿಮೆಯಲ್ಲಿ 25%ರಷ್ಟು ಮೊತ್ತವನ್ನು ಸಂಘವೇ ಭರಿಸಲಿದೆ. ಒಂದು ವರ್ಷದ ಜಾನುವಾರು ವಿಮೆಯಲ್ಲಿ 75% ಒಕ್ಕೂಟವೇ ಭರಿಸಲಿದೆ. ಉಳಿದ 25% ಸಂಘ ಭರಿಸುವುದರಿಂದ ಹೈನುಗಾರರಿಗೆ ಆರ್ಥಿಕವಾಗಿ ಸಾಕಷ್ಟು ಸಹಕಾರಿಯಾಗಲಿದೆ ಎಂದು ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಮೊಗೆರೋಡಿ ಪ್ರಕಟಣೆಯಲ್ಲಿ ತಿಳಿಸಿದರು.

ಸದಸ್ಯರಿಗೆ ಪ್ರೋತ್ಸಾಧನವನ್ನು ಈ ವಾರ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಮಂಜಯ್ಯ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

ಮಡಂತ್ಯಾರು ಹಾಲು ಉತ್ಪಾದಕ ಸಂಘದ ಪ್ರತಿದಿನ ಸರಾಸರಿ 2500 ಲೀ ಹಾಲು ಸಂಗ್ರಹಣೆ ಮಾಡುತ್ತಿದೆ. ಸುಮಾರು 250-260 ಮಂದಿ ಹೈನುಗಾರರು ದಿನನಿತ್ಯ ಸಂಘಕ್ಕೆ ಹಾಲನ್ನು ಪೂರೈಸುತ್ತಿದ್ದಾರೆ ಎಂಬ ಮಾಹಿತಿ ಇದೆ.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...