Thursday, January 29, 2026

ಮಗುಸ್ನೇಹಿ ಪಂಚಾಯತ್ ಎಲ್ಲರ ಗುರಿಯಾಗಲಿ: ಪ್ರಮೋದ್ ಕುಮಾರ್ ರೈ

ಬಂಟ್ವಾಳ: ನಮ್ಮ ಪಂಚಾಯತ್ ಅನ್ನು ಮಗುಸ್ನೇಹಿ ಪಂಚಾಯತ್ ಯನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ಜಂಟಿ ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಹೇಳಿದರು.
ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರ ಮತ್ತು ಪಡಿ ಮಂಗಳೂರು ಸಹಯೋಗದಲ್ಲಿ ಕಾವಳಪಡೂರು ಗ್ರಾ.ಪಂ. ಕಾರ್ಯಾಲಯದಲ್ಲಿ ನಡೆದ ಮಗು ಸ್ನೇಹಿ ಪಂಚಾಯತ್ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.
ಮಗು ಸ್ನೇಹಿ ಪಂಚಾಯತ್ ರೂಪಿಸಲು ಗ್ರಾಮಸ್ಥರ ಸಹಕಾರ ಅಗತ್ಯ. ಪ್ರತಿಯೊಬ್ಬ ಮತದಾರ ಪ್ರಜೆ ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಈ ಯೋಜನೆ ಸಾಧ್ಯ ಎಂದರು.
ಸಂಪನ್ಮೂಲ ವ್ಯಕ್ತಿಯಾದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯ ಕುಮಾರ್ ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣಾ ನಿಧಾನ ಹಾಗೂ ಗ್ರಾಮ ಜ ಜಾಗೃತಿಯ ಕುರಿತು ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೇದವ, ಮಹಿಳಾ ಮಕ್ಕಳ ಅಭಿವೃದ್ಧಿಇಲಾಖಾಧಿಕಾರಿಗಳು ಮೇಲ್ವಿಚಾರಕಿ ಸಿಂಧು
ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಕಾರ್ಯ ವೈಖರಿ ಬಗ್ಗೆ ಚರ್ಚಿಸಿದರು.
ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಮುಖ್ಯ ಶಿಕ್ಷಕರು, ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿಯರು, ಶಾಲಾಭಿವೃದ್ಧಿ ಸಮಿತಿಗಳ ಅಧ್ಯಕ್ಷರು ಹಾಜರಿದ್ದರು.
ಪಡಿ ಸಂಸ್ಥೆ ಸಂಯೋಜಕಿ ರಾಜೇಶ್ವರಿ ಕಾರ್ಯಾಗಾರ ನಡೆಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...