ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬಂಟ್ವಾಳ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಡಿ.12 ರಂದು ಶನಿವಾರ ಬೆಳಿಗ್ಗೆ ಬಿಸಿ ರೋಡಿನ ಸರಕಾರಿ ನೌಕರರ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘ ದ ಅಧ್ಯಕ್ಷ ಉಮಾನಾಥ ರೈ ಮೇರಾವು ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಸಮಾರಂಭದ ಉದ್ಘಾಟನೆ ಯನ್ನು ಮಾಡಲಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಆರೋಗ್ಯಾಧಿಕಾರಿ ಡಾ! ದೀಪಾ ಪ್ರಭು ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.












