Tuesday, July 1, 2025

ಅಡ್ಯನಡ್ಕ: ಪೋಷಕರ ಮಹಾಸಭೆ

ಅಡ್ಯನಡ್ಕ: ವಿದ್ಯೆಗೂ ವಿಜ್ಞಾನಕ್ಕೂ ವ್ಯತ್ಯಾಸವಿದೆ. ವಿಜ್ಞಾನಕ್ಕೆ ಸಮಾನವಾದದು ಬೇರಾವುದೂ ಇಲ್ಲ. ವಿಜ್ಞಾನವು ಮನುಷ್ಯನೊಳಗೆ ಆವಿರ್ಭವವಾಗುವ ವಿಶೇಷ ಸಾಮರ್ಥ್ಯ ಎಂದು ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಶಂಕರ್ ಪಾಟಾಳಿ ಹೇಳಿದರು.
ಅವರು ಜು. 13ದು ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ವಾರಣಾಶಿ ಅಧ್ಯಕ್ಷತೆ ವಹಿಸಿದ್ದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಡಿ.ಶ್ರೀನಿವಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಗಣೇಶ್ ಕೆ., ಉಪಾಧ್ಯಕ್ಷರಾಗಿ ವಿಶ್ವೇಶ್ವರ ಶಾಸ್ತ್ರಿ, ಖಜಾಂಚಿಯಾಗಿ ಜಯರಾಮ ಆಳ್ವ ಆಯ್ಕೆಯಾದರು. ಜೀವಶಾಸ್ತ್ರ ಉಪನ್ಯಾಸಕ ರವಿಕುಮಾರ್ ಎಸ್. ಅವರು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಹಿಂದಿ ಉಪನ್ಯಾಸಕ ಸೋಮಶೇಖರ್ ಎಚ್. ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ.ಆರ್. ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಶೀನಪ್ಪ ನಾಯ್ಕ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಕೆ. ವಂದಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...