Friday, June 27, 2025

ಮೈರ: ಶಿಶು ಸ್ಪರ್ಧೆ

ವಿಟ್ಲ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಕೇಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸಂಯೋಜನೆಯೊಂದಿಗೆ ಪೋಷಣ್ ಅಭಿಯಾನದ ಪೋಷಣ್ ಪಕ್ಪಾಡ್ ಕಾರ್ಯಕ್ರಮಗಳ ಅಂಗವಾಗಿ ಮೈರ ಶ್ರೀದುರ್ಗಾ ರಂಗಮಂದಿರದಲ್ಲಿ ಶಿಶು ಸ್ಪರ್ಧೆ ನಡೆಯಿತು.
ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು. ಕೇಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ಉಪಸ್ಥಿತರಿದ್ದರು.
ಅಡ್ಯನಡ್ಕ ಆರೋಗ್ಯ ಕೇಂದ್ರದ ಸಹಾಯಕಿಯರಾದ ಪುಷ್ಪಾವತಿ, ಶಶಿಕಲಾ ಆರೋಗ್ಯವಂತ ಶಿಶುಗಳನ್ನು ಆಯ್ಕೆ ಮಾಡಿದರು.
ಭಾರತಿ ಪ್ರಾರ್ಥನೆ ಹಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸೋಮಕ್ಕ ಸ್ವಾಗತಿಸಿ, ಪ್ರಸ್ತಾವಿಸಿದರು. ಅನಸೂಯ ವಂದಿಸಿದರು. ಲಕ್ಷ್ಮೀ ಭಟ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...