ಬಂಟ್ವಾಳ: ಕೈಕಂಬದಿಂದ ಸ್ಯಾಂಡ್ ಬಝಾರ್ ತಲಪಾಡಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಎಡಭಾಗದಲ್ಲಿ ರಸ್ತೆಗೆ ತಾಗಿಕೊಂಡೇ ಲಾರಿಗಳ ನಿಲುಗಡೆ, ಸಂಚಾರದಿಂದ ಪಾದಚಾರಿ ಹಾಗೂ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರರಾದ ಕೆ.ಎಚ್. ಅಬೂಬಕರ್, ಪಿ.ಎ. ರಹೀಂ ಆರೋಪಿಸಿದ್ದಾರೆ.
ಈ ಬಗ್ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ತಲಪಾಡಿಯಲ್ಲಿ ಸ್ಯಾಂಡ್ ಬಝಾರ್ ಆರಂಭವಾಗಿದ್ದು, ಮರಳಿಗಾಗಿ ಕೈಕಂಬದಿಂದ ತಲಪಾಡಿಯವೆರೆಗಿನ ರಾಷ್ಟ್ರೀಯ ಹೆದ್ದಾರಿಯ ಎಡಭಾಗದಲ್ಲಿ ರಸ್ತೆಗೆ ತಾಗಿಕೊಂಡೇ ಲಾರಿಗಳು ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದ ಬೆಳಿಗ್ಗಿನ ಹೊತ್ತಿನಲ್ಲಿ ಪಾದಚಾರಿಗಳಿಗೆ, ಶಾಲಾ ಮಕ್ಕಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಅದಲ್ಲದೆ, ಈ ಭಾಗದ ಮನೆಗಳಿಗೆ, ಅಪಾರ್ಟ್‌ಮೆಂಟ್‌ಗಳ ರಸ್ತೆಗಳಿಗೆ ಸಂಚರಿಸಲು ಸಂಕಷ್ಟ ಎದುರಾಗಿದೆ. ಲಾರಿಗಳ ಸಾಲುಗಳಿಂದ ಹೆದ್ದಾರಿಯ ಬರುತ್ತಿರುವ ವಾಹನಗಳನ್ನು ಗಮನಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಮಸ್ಯೆ ಪರಿಹಾರ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
