ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಭೇಟಿ ಮಾಡಿ ಬಂಟ್ವಾಳ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 25 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಯವರು ಅನುದಾನ ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಇದೇ ವೇಳೆ ಶ್ರೀ ಕ್ಷೇತ್ರ ಒಡಿಯೂರು ಸಂಸ್ಥಾನಮ್ ಮತ್ತು ಶ್ರೀ ಒಡಿಯೂರು ವಿ.ಸೌ.ಸ. ನಿಂದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅನಾಹುತದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ನೆರೆ ಪರಿಹಾರ ನಿಧಿಗೆ ನೀಡಲಾದ 10 ರೂ.ವಿನ ನೆರವಿನ ಚೆಕ್ ನ್ನು ಶಾಸಕ ಯು.ರಾಜೇಶ್ ನಾಯ್ಕ್ ಅವರು ಮುಖ್ಯಮಂತ್ರಿ ಬಿಎಸ್ ವೈ ಅವರಿಗೆ ಹಸ್ತಾಂತರಿಸಿದರು.