Friday, June 27, 2025

ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆಯಾಗುವುದನ್ನು ತಡೆಯುವಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

 

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಮುಖ್ಯವಾಗಿ ಮಣಿನಾಲ್ಕೂರು , ಕಡೇಶ್ವಾಲ್ಯ,ಕರ್ಪೆ ಪ್ರದೇಶದಲ್ಲಿ ವ್ಯಾಪಕವಾದ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ . ಕಡೇಶ್ವಾಲ್ಯದಲ್ಲಿ ಮರಳುಗಾರಿಕೆ ಪಡೆದ ಗುತ್ತಿಗೆದಾರರೊಬ್ಬರು ಇತರ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆಗೆ ಸಹಕರಿಸುತ್ತಿದ್ದು ಅವರ ಮೂಲಕ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ .

ರಾಜಾರೋಷವಾಗಿ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಗಣಿಗಾರಿಕಾ ಇಲಾಖೆ , ಕಂದಾಯ ಇಲಾಖೆ , ಪೊಲೀಸ್ ಇಲಾಖೆ ಇದನ್ನು ನಿಯಂತ್ರಣ ಮಾಡಲು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಅನೇಕ ಭಾರೀ ಸಂಬಂಧಪಟ್ಟವರಿಗೆ ತಿಳಿಸಿದರೂ ರಾಜಕೀಯ ಪ್ರಭಾವದಿಂದ ಇವರ ಬಗ್ಗೆ ಕ್ರಮ ಕೈಗೊಳ್ಳಲು ಇಲಾಖೆಯು ನಿಷ್ಕ್ರಿಯವಾಗಿದ್ದಾರೆ. ಅಕ್ರಮ ಮರಳುಗಾರಿಕೆ ದಂಧೆ ಮಾಡುವ ವ್ಯಕ್ತಿಗಳು ಕ್ಷೇತ್ರದ ಶಾಸಕರ ನಿಕಟವರ್ತಿಗಳಾಗಿದ್ದು ಅವರ ಒತ್ತಡದಿಂದಾಗಿ ಇಲಾಖೆಯು ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂದ್ಧವಾಗಿ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ . ಇದನ್ನು ತಡೆಗಟ್ಟುವರೇ. ಮಾನ್ಯ ಜಿಲ್ಲಾಧಿಕಾರಿಗಳಾದ ತಾವು ನಿಸ್ಪಕ್ಷಪಾತವಾಗಿ ಅಗತ್ಯವಾದ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ನಾವುಗಳು ಒತ್ತಾಯ ಮಾಡುತ್ತಿದ್ದೇವೆ . ಇದರ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ವಿನಂತಿಸಿಕೊಂಡರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...