Friday, June 27, 2025

ಸಲ್ಮಾನ್ ಖುರ್ಷಿದ್ ಪುಸ್ತಕದ ಮೇಲೆ ನಿರ್ಬಂಧ, ಹಾಗೂ ದತ್ತ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಮನವಿ

ಹಿಂದುತ್ವವನ್ನು ಭಯೋತ್ಪಾದನೆಗೆ ಹೋಲಿಸಿದ ಸಲ್ಮಾನ್ ಖುರ್ಷಿದ್‌ರ ಪುಸ್ತಕದ ಮೇಲೆ ನಿರ್ಬಂಧ ಹೇರಲು ಮತ್ತು ದತ್ತ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಮನವಿ !

ರಾಹುಲ್ ಗಾಂಧಿ ಮತ್ತು ಸಲ್ಮಾನ ಖುರ್ಷಿದ್ ಅವರು ‘ಹಿಂದುಯಿಸಮ್’ ಮತ್ತು ಹಿಂದುತ್ವದ ನಡುವೆ ವ್ಯತ್ಯಾಸವಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ‘ಭಗವಾನ್ ಶ್ರೀರಾಮ ಮತ್ತು ಶ್ರೀಕೃಷ್ಣ ಕಾಲ್ಪನಿಕವಾಗಿದ್ದಾರೆ, ‘ಕೇಸರಿ ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯವಿದೆ’, ಎಂದು ಹೇಳಿ ಹಿಂದೂ ಧರ್ಮವನ್ನು ಅವಮಾನ ಮಾಡಿದ್ದರು. ಈಗ ಅದೇ ಕಾಂಗ್ರೆಸ್ಸಿನ ನಾಯಕರು ಹಿಂದೂಗಳನ್ನು ‘ಬೊಕೊ-ಹರಾಮ್ ಮತ್ತು ‘ಐಸಿಸ್’ನ ಭಯೋತ್ಪಾದಕರೊಂದಿಗೆ ಹೋಲಿಸಿ ಅವಮಾನಿಸುತ್ತಿದ್ದಾರೆ. ಇದಕ್ಕೆ ತೇಪೆಹಚ್ಚಲು ಹಿಂದುತ್ವ ಮತ್ತು ‘ಹಿಂದೂಯಿಸಮ್’ ನಡುವೆ ವ್ಯತ್ಯಾಸವಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಲ್ಮಾನ್ ಖುರ್ಷಿದ್ ಅವರು ತಮ್ಮ ಪುಸ್ತಕವನ್ನು ಹಿಂಪಡೆಯಬೇಕು ಮತ್ತು ಹಿಂದೂ ಸಮಾಜದ ಬಳಿ ಕ್ಷಮೆ ಕೇಳಬೇಕು. ಅದೇ ರೀತಿ ಭಾರತದಲ್ಲಿ ಡಾ-ವಿನ್ಸಿ ಕೋಡ್, ಸೈಟಾನಿಕ್ ವರ್ಸಸ್ ಈ ಇತರ ಧರ್ಮದವರ ಪುಸ್ತಕಗಳನ್ನು ನಿಷೇಧಿಸಬಹುದಾದರೆ ಸಲ್ಮಾನ್ ಖುರ್ಷಿದ್ ಅವರ ಪುಸ್ತಕ ‘ಸನ್‌ರೈಸ್ ಓವರ್ ಅಯೋಧ್ಯಾ ನೇಷನ್‌ಹುಡ್ ಇನ್ ಅವರ್ ಟೈಮ್ಸ್’ ಅನ್ನು ಸಹ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸರಕಾರಕ್ಕೆ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಕೋಲಾರದಲ್ಲಿ ದತ್ತಮಾಲಾ ಭಕ್ತಾದಿಗಳ ಮೇಲಾದ ಆಕ್ರಮಣ ಮತ್ತು ಮಾರಾಣಾಂತಿಕ ಹಲ್ಲೆ ನಡೆಸಿದ ಅಪರಾಧಿಗಳನ್ನು ಬಂಧಿಸಬೇಕು. ದತ್ತ ಮಾಲಾಧಾರಿಗಳನ್ನು ಜೀವಂತವಾಗಿ ದಹನ ಮಾಡುವ ಪೂರ್ವನಿಯೋಜಿತ ಷಡ್ಯಂತ್ರವನ್ನು ರೂಪಿಸಿರುವುದು ಗಮನಕ್ಕೆ ಬರುತ್ತಿದೆ. ಹಿಂದೂ ಜನಜಾಗೃತಿ ಸಮಿತಿ ಮತ್ತು ಸಮಸ್ತ ಹಿಂದೂ ಸಂಘಟನೆಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸರಕಾರವು ಕಲ್ಲು ತೂರಾಟ ಮಾಡಿದ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ದತ್ತ ಭಕ್ತಾದಿಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಬಂಟ್ವಾಳ ಮಿನಿವಿಧಾನಸೌಧದಲ್ಲಿ ಉಪ ತಹಶೀಲ್ದಾರ್  ನರೇಂದ್ರ ಇವರ ಮೂಲಕ ಸರ್ಕಾರಕ್ಕೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ  ಉಪೇಂದ್ರ ಆಚಾರ್ಯ, ಜಯಕುಮಾರ್, ಪಾಲಕ್ಷ,  ರಾಧಾಕೃ?, ರವಿಚಂದ್ರ ಗಿರಿ, ಧರ್ಮ ಪ್ರೇಮಿಗಳಾದ ಯಾದೇಶ ಬೆಂಜನಪದವು, ನಾಗೇಶ್ ಬಿಸಿರೋಡು,  ರಾಜೇಶ್ ಬಂಟ್ವಾಳ,  ದಿಲೀಪ್, ಸೋಮನಾಥ್ , ಸೋಮಶೇಖರ್, ಇವರು ಹಾಜರಿದ್ದರು

ಚಂದ್ರ ಮೊಗೇರ, ಜಿಲ್ಲಾ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ

ಸಂಪರ್ಕ : 7204082652

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...